ಇಸ್ಲಾಮಾಬಾದ್ (ಪಿಟಿಐ): ಪಾಕಿಸ್ತಾನದ ಸೇನಾ ಮುಖ್ಯಸ್ಥ ಜನರಲ್ ಅಶ್ಫಾಕ್ ಪರ್ವೇಜ್ ಖಯಾನಿ ಮತ್ತು ಐಎಸ್ಐ ಮುಖ್ಯಸ್ಥ ಲೆ.ಜ. ಅಹಮದ್ ಶುಜಾ ಪಾಶ ಅವರ ವಿರುದ್ಧ ಕ್ರಮ ಕೈಗೊಳ್ಳುವ ಆಲೋಚನೆ ಇಲ್ಲ ಎಂದು ಅಟಾರ್ನಿ ಜನರಲ್ ಅನ್ವರ್-ಉಲ್-ಹಖ್ ಸುಪ್ರೀಂ ಕೋರ್ಟ್ಗೆ ಸ್ಪಷ್ಟಪಡಿಸಿದ್ದಾರೆ.

ಇವರಿಬ್ಬರ ವಿರುದ್ಧ ಸರ್ಕಾರ ಯಾವುದೇ ಕ್ರಮ ತೆಗೆದುಕೊಳ್ಳದಂತೆ ಆದೇಶ ನೀಡಬೇಕೆಂದು ಕೋರಿ ಸಲ್ಲಿಸಲಾದ ಅರ್ಜಿಯ ವಿಚಾರಣೆ ವೇಳೆ ಮುಖ್ಯ ನ್ಯಾಯಮೂರ್ತಿ ಇಫ್ತಿಕಾರ್ ಅಹಮದ್ ನೇತೃತ್ವದ ಪೀಠಕ್ಕೆ ಅವರು ಈ ಮಾಹಿತಿ ನೀಡಿದರು.

ರಕ್ಷಣಾ ಕಾರ್ಯದರ್ಶಿ ಲೋಧಿ ಅವರನ್ನು ಗಿಲಾನಿ ಅವರು ವಜಾ ಮಾಡಿದ ಮಾದರಿಯಲ್ಲೇ ಖಯಾನಿ ಅವರನ್ನು ವಜಾಗೊಳಿಸದಂತೆ ಆದೇಶ ನೀಡಬೇಕೆಂದು ಅರ್ಜಿದಾರರು ಕೋರಿದ್ದರು. ಈ ಹಿನ್ನೆಲೆಯಲ್ಲಿ ಸೂಕ್ತ ಉತ್ತರ ನೀಡುವಂತೆ ಮುಖ್ಯ ನ್ಯಾಯಮೂರ್ತಿ ಅವರು ಅಟಾರ್ನಿ ಜನರಲ್ ಅವರಿಗೆ ಆದೇಶಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.