ಶುಕ್ರವಾರ, ಜನವರಿ 24, 2020
28 °C

ಖರ್ಗೆ ವಿರುದ್ಧ ಸಿಎಂ ಟೀಕೆ ಸರಿಯಲ್ಲ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕೇಂದ್ರ ಸಚಿವ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರ ಮೇಲೆ ಒತ್ತಡ ತಂದ ಕಾರಣ ಹೈದರಾಬಾದ್-ಕರ್ನಾಟಕ ಭಾಗಕ್ಕೆ ವಿಶೇಷ ಸ್ಥಾನಮಾನ ನೀಡಲು ಸಂವಿಧಾನದ 371ನೇ ವಿಧಿಗೆ ತರಬೇಕಿರುವ ತಿದ್ದುಪಡಿಯ ಕರಡು ಸಿದ್ಧವಾಗಿದೆ. ಆದರೆ ಮುಖ್ಯಮಂತ್ರಿಯವರು ಖರ್ಗೆಯವರ ಕುರಿತು ಅಸಮಾಧಾನ ವ್ಯಕ್ತಪಡಿಸಿರುವುದು ಸರಿಯಲ್ಲ ಎಂದು ಕೆಪಿಸಿಸಿ ವಕ್ತಾರ ಬಸವರಾಜ ರಾಯರೆಡ್ಡಿ ಹೇಳಿದರು.ಕೆಪಿಸಿಸಿ ಕಚೇರಿಯಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, `ಹೈದರಾಬಾದ್-ಕರ್ನಾಟಕ ಭಾಗಕ್ಕೆ ವಿಶೇಷ ಸ್ಥಾನಮಾನ ನೀಡುವ ಸಂಬಂಧ ಖರ್ಗೆ ಮತ್ತು ಸಂಸದ ಧರ್ಮ ಸಿಂಗ್ ಅವರು ಕೇಂದ್ರದ ಮೇಲೆ ಸಾಕಷ್ಟು ಒತ್ತಡ ತರುತ್ತಿಲ್ಲ ಎಂದು ಮುಖ್ಯಮಂತ್ರಿಗಳು ಮಾಡಿರುವ ಆರೋಪ ಜವಾಬ್ದಾರಿಯುತ ಅಲ್ಲ~ ಎಂದು ಹೇಳಿದರು.

 

ಪ್ರತಿಕ್ರಿಯಿಸಿ (+)