ದಾವಣಗೆರೆ: ಮಾದರಿ ಚುನಾವಣಾ ನೀತಿ ಸಂಹಿತೆಯನ್ನು ಲೋಕಸಭಾ ಚುನಾವಣೆಗೆ ಸ್ಪರ್ಧಿಸಿರುವ ಅಭ್ಯರ್ಥಿಗಳು ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ಎಸ್.ಟಿ.ಅಂಜನ ಕುಮಾರ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ ಲೋಕಸಭಾ ಸಾರ್ವತ್ರಿಕ ಚುನಾವಣೆಯ ಖರ್ಚು, ವೆಚ್ಚಕ್ಕೆ ಸಂಬಂಧಿಸಿದಂತೆ ದರಪಟ್ಟಿ ಮಾಹಿತಿ ಮತ್ತು ಮಾದರಿ ನೀತಿ ಸಂಹಿತೆಯನ್ನು ಪಾಲಿಸುವುದರ ಕುರಿತು ನಡೆದ ಸಭೆಯಲ್ಲಿ ಅವರು ಮಾತನಾಡಿದರು.

‘ಖರ್ಚು, ವೆಚ್ಚಕ್ಕೆ ಸಂಬಂಧಿಸಿದಂತೆ ಇರುವ ನಿಯಮಗಳನ್ನು ತಪ್ಪದೇ ಪಾಲಿಸಬೇಕು. ನಾಮಪತ್ರ ಸಲ್ಲಿಕೆಗೆ ಕ್ಷಣಗಣನೆ ಪ್ರಾರಂಭವಾಗಿದೆ. ನಿಗದಿತ ನಮೂನೆಗಳನ್ನು ಪಡೆದು ವಿವರವಾದ ಪೂರ್ಣ ಮಾಹಿತಿ ನೀಡಬೇಕು. ಚುನಾವಣಾ ಪ್ರಚಾರಕ್ಕೆ ಫ್ಲೆಕ್ಸ್, ಬಂಟಿಂಗ್ಸ್, ರ್ಯಾಲಿ ಮತ್ತು ಮೆರವಣಿಗೆಗೆ ಆಯಾ ತಾಲ್ಲೂಕಿನ ತಹಶೀಲ್ದಾರ್ ಅವರಿಂದ ಅನುಮತಿ ಪಡೆಯುವುದು ಕಡ್ಡಾಯ. ವಾಹನಗಳ ಅನುಮತಿಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಅನುಮತಿ ನೀಡಲಾಗುವುದು’ ಎಂದು ಮಾಹಿತಿ ನೀಡಿದರು.
ಇದೇ ವೇಳೆ ಖರ್ಚು– ವೆಚ್ಚಗಳ ದರ ವಿವರಗಳ ಮಾಹಿತಿ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.