ಭಾನುವಾರ, ಏಪ್ರಿಲ್ 18, 2021
30 °C

ಖಾತರಿ: ಸಮರ್ಪಕ ಜಾರಿಗೆ ಒತ್ತಾಯ- ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೊಪ್ಪಳ: ಜಿಲ್ಲೆಯಲ್ಲಿ ಉದ್ಯೋಗ ಖಾತರಿ ಯೋಜನೆಯನ್ನು ಸಮರ್ಪಕವಾಗಿ ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರೈತ ಸಂಘ ಹಾಗೂ ಟ್ರೇಡ್ ಯೂನಿಯನ್ ಸೆಂಟರ್ ಆಫ್ ಇಂಡಿಯಾದ (ಟಿಯುಸಿಐ) ನೇತೃತ್ವದಲ್ಲಿ ಗುರುವಾರ ಇಲ್ಲಿ ಕೂಲಿಕಾರ್ಮಿಕರು ಪ್ರತಿಭಟನೆ ನಡೆಸಿದರು.ಗಡಿಯಾರ ಕಂಬದಿಂದ ಜಿಲ್ಲಾಡಳಿತ ಭವನದ ವರೆಗೆ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು ನಂತರ ಮುಖ್ಯ ದ್ವಾರದ ಬಳಿ ಧರಣಿ ನಡೆಸಿದರು.ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಟಿಯುಸಿಐ ರಾಜ್ಯಾಧ್ಯಕ್ಷ ಡಿ.ಎಚ್.ಪೂಜಾರ, ಜಿಲ್ಲೆಯ ಎಲ್ಲ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಉದ್ಯೋಗ ಖಾತರಿ ಯೋಜನೆಯನ್ನು ಸಮರ್ಪಕವಾಗಿ ಜಾರಿಗೊಳಿಸುವ ಮೂಲಕ ಕೂಲಿಕಾರ್ಮಿಕರು ಗುಳೆ ಹೋಗುವುದನ್ನು ತಡೆಗಟ್ಟಬೇಕು ಎಂದು ಒತ್ತಾಯಿಸಿದರು.ಜಾನುವಾರುಗಳಿಗೆ ಸಮರ್ಪಕವಾಗಿ ಮೇವು ಒದಗಿಸಬೇಕು ಹಾಗೂ ಮುಚ್ಚಲಾಗಿರುವ ಗೋಶಾಲೆಗಳನ್ನು ಪುನಃ ಆರಂಭಿಸಬೇಕು ಎಂದು ಒತ್ತಾಯಿಸಿದರು.ತಾವರಗೇರಾ ಗ್ರಾಮ ಪಂಚಾಯಿತಿ ಸೇರಿದಂತೆ ಯೋಜನೆ ಅನುಷ್ಠಾನದಲ್ಲಿ ಭ್ರಷ್ಟಾಚಾರ ನಡೆದಿರುವ ಗ್ರಾಮ ಪಂಚಾಯಿತಿಗಳನ್ನು ಗುರುತಿಸಿ, ಅವುಗಳನ್ನು ಸೂಪರ್‌ಸೀಡ್ ಮಾಡಬೇಕು, ತಾವರಗೇರಾ ಗ್ರಾಮ ಪಂಚಾಯಿತಿಯಲ್ಲಿ ಭ್ರಷ್ಟಾಚಾರ ನಡೆಸಿರುವವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿ, ತನಿಖೆ ನಡೆಸಬೇಕು ಎಂದೂ  ಒತ್ತಾಯಿಸಿದರು.ಸಂಘಟನೆಯ ಮುಖಂಡರಾದ ಬಸವರಾಜ ಬಾಗಲವಾಡ, ನಾಗರಾಜ ಪೂಜಾರ, ಕೆ.ಬಿ.ಗೋನಾಳ, ಬಾಳನಗೌಡ ಕೆ.ಎಚ್. ನೇತೃತ್ವ ವಹಿಸಿದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.