ಗುರುವಾರ , ಜೂಲೈ 2, 2020
23 °C

ಖಾತ್ರಿ ಯೋಜನೆಯಲ್ಲಿ ಕೆಲಸಕ್ಕೆ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಖಾತ್ರಿ ಯೋಜನೆಯಲ್ಲಿ ಕೆಲಸಕ್ಕೆ ಆಗ್ರಹ

ಶಿಕಾರಿಪುರ: ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ನಮಗೆ ಕೆಲಸ ನೀಡಬೇಕು ಎಂದು ಒತ್ತಾಯಿಸಿ ಗಾಮ ಗ್ರಾಮದ ಕೂಲಿ ಕಾರ್ಮಿಕರು ತಾಲ್ಲೂಕು ಪಂಚಾಯ್ತಿ ಕಚೇರಿ ಎದುರು ಗುರುವಾರ ಪ್ರತಿಭಟನೆ ನಡೆಸಿದರು.ಗ್ರಾಮದಲ್ಲಿ ಕೂಲಿಕಾರರಿಗೆ ಕೆಲಸ ನೀಡುತ್ತಿಲ್ಲ ಬದಲಿಗೆ ಉಳ್ಳವರಿಗೆ ಈಗಾಗಲೇ ಹೆಚ್ಚು ದಿನ ಕೆಲಸ ಮಾಡಿದರಿಗೆ ಕೆಲಸ ನೀಡುತ್ತಿದ್ದು, ಇದರಿಂದ ನಮಗೆಲ್ಲಾ ಅನ್ಯಾಯವಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.ಎಂದಿನಂತೆ ಇಂದೂ ಕೂಲಿ ಕೆಲಸಕ್ಕಾಗಿ ತೆರಳಿದ್ದು, ಕೊನೆ ಕ್ಷಣದಲ್ಲಿ ಗ್ರಾ.ಪಂ. ಕಾರ್ಯದರ್ಶಿ ಕೆಲಸವಿಲ್ಲವೆಂದು ವಾಪಸ್ ಕಳುಹಿಸಿದ್ದು, ಕೆಲ ರೈತರಿಗೆ ಮಾತ್ರ ಉದ್ಯೋಗ ನೀಡಿದ್ದು ತಾರತಮ್ಯ ಎಸಗಿದ್ದಾರೆ. ಇಂತಹ ಅಧಿಕಾರಿಯನ್ನು ಕೂಡಲೇ ಅಮಾನತು ಮಾಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.ತಾಲ್ಲೂಕು ಪಂಚಾಯ್ತಿ ಕಾರ್ಯ ನಿರ್ವಹಣಾಧಿಕಾರಿ ತಿರುಮಲೇಶ್ ಪ್ರತಿಭಟನಾಕಾರರೊಂದಿಗೆ ಮಾತುಕತೆ ನಡೆಸಿದರಲ್ಲದೇ ಉದ್ಯೋಗ ನೀಡುವ ಭರವಸೆ ನೀಡಿದ ನಂತರ ಪ್ರತಿಭಟನೆ ಅಂತ್ಯವಾಯಿತು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.