ಖಾಲಿ ಹುದ್ದೆ ಭರ್ತಿಗೆ ಆಗ್ರಹ

7

ಖಾಲಿ ಹುದ್ದೆ ಭರ್ತಿಗೆ ಆಗ್ರಹ

Published:
Updated:

ಮಹದೇವಪುರ:  ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಸುಮಾರು ಒಂದು ಲಕ್ಷಕ್ಕೂ ಅಧಿಕ ಹುದ್ದೆಗಳನ್ನು ಆದಷ್ಟು ಬೇಗ ಭರ್ತಿ ಮಾಡಬೇಕು ಎಂದು ಕರ್ನಾಟಕ ಪದವೀಧರರ ಯುವ ವೇದಿಕೆಯ ರಾಜ್ಯಾಧ್ಯಕ್ಷ ವೈ.ಲಕ್ಷ್ಮೀಪ್ರಸಾದ್ ಸರ್ಕಾರವನ್ನು ಆಗ್ರಹಿಸಿದ್ದಾರೆ.ಮಾರತ್‌ಹಳ್ಳಿ ಸಮೀಪದ ಕುಂದಲಹಳ್ಳಿಯಲ್ಲಿ ಇತ್ತೀಚೆಗೆ ವೇದಿಕೆ ಹಮ್ಮಿಕೊಂಡಿದ್ದ ನಿರುದ್ಯೋಗಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪ್ರತಿ ವರ್ಷವೂ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ನಿರುದ್ಯೋಗಿ ಪದವೀಧರರ ಸಂಖ್ಯೆ ಹೆಚ್ಚಾಗುತ್ತಲೇ ಇದೆ.

 

ಈ ನಿರುದ್ಯೋಗಿಗಳ ಸಂಖ್ಯೆಯನ್ನು ಕಡಿಮೆ ಮಾಡಲು ಸರ್ಕಾರ ತುರ್ತಾಗಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಬೇಕು ಎಂದು ಒತ್ತಾಯಿಸಿದರು. ಒಂದು ವೇಳೆ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸದಿದ್ದಲ್ಲಿ    ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry