ಬುಧವಾರ, ಏಪ್ರಿಲ್ 21, 2021
29 °C

ಖಾಲಿ ಹುದ್ದೆ ಭರ್ತಿಗೆ ಆಗ್ರಹಿಸಿ ಏಕವ್ಯಕ್ತಿ ಧರಣಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬಾಗಲಕೋಟೆ: ರಾಜ್ಯ ಮತ್ತು ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ತಕ್ಷಣ ಭರ್ತಿ ಮಾಡಬೇಕು ಎಂದು ಆಗ್ರಹಿಸಿ ಸನಾಥ ಬಂಧು ಪಕ್ಷದ ಜೆ.ಉದಯ ಅಗಸನೂರು ಜಿಲ್ಲಾಡಳಿತ ಭವನದ ಮುಂದೆ ಗುರುವಾರ ಒಂದು ದಿನದ ಪ್ರತಿಭಟನಾ ಧರಣಿ ನಡೆಸಿದರು.ರಾಜ್ಯದ 150 ಪದವಿ ವಿದ್ಯಾಲಯಗಳಲ್ಲಿ ಪ್ರಾಂಶುಪಾಲರಿಲ್ಲ, ರಾಜ್ಯದಲ್ಲಿ 25 ಸಾವಿರಕ್ಕೂ ಹೆಚ್ಚು ಶಿಕ್ಷಕರ ಕೊರತೆ ಇದೆ. ರಾಜ್ಯದ ಕಾರ್ಯಾಂಗದಲ್ಲಿ 2.14 ಲಕ್ಷಕ್ಕೂ ಹೆಚ್ಚು ನೌಕರರ ಕೊರತೆ ಇದೆ. ಈ ಅವ್ಯವಸ್ಥೆಗೆ ಹಿಡಿದ ಕೈಗನ್ನಡಿಯಂತೆ ಶಾಸಕಾಂಗ ತನ್ನದೇ ಐಲು ದರ್ಬಾರಿನಲ್ಲಿ ಮುಳುಗಿದೆ ಎಂದು ದೂರಿದರು.2011ರಿಂದ ಸನಾಥ ಬಂಧು ಪಕ್ಷವು ಖಾಲಿ ಹುದ್ದೆಗಳ ಭರ್ತಿಗಾಗಿ ಅನೇಕ ಬಾರಿ ಧರಣಿ ಮೂಲಕ, ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕರು, ಸಚಿವರಿಗೆ ಸೇರಿದಂತೆ ಎಲ್ಲ ಜನಪ್ರತಿನಿಧಿಗಳಿಗೆ ಆಗ್ರಹಿಸುತ್ತಾ ಬಂದಿದ್ದು, ಇದರ ಬಗ್ಗೆ ಮುಖ್ಯಮಂತ್ರಿಯು ಸೇರಿದಂತೆ ಯಾವೊಬ್ಬ ಜನಪ್ರತಿನಿಧಿಯು ವಿಧಾನಸೌಧದಲ್ಲಿ ಪ್ರಸ್ತಾಪಿಸಿಲ್ಲವೆಂದು ದೂರಿದರು.ಖಾಲಿ ಇರುವ ಹುದ್ದೆಗಳ ಭರ್ತಿಗೆ ಆಗ್ರಹಿಸಿ ರಾಜ್ಯದ 30 ಜಿಲ್ಲೆಗಳಲ್ಲಿ ಪ್ರವಾಸ ಕೈಗೊಳ್ಳಲಾಗಿದೆ. ಈಗಾಗಲೇ ಆರು ಜಿಲ್ಲೆಗಳಲ್ಲಿ ಧರಣಿ ನಡೆಸಿ ನಡೆಸಿರುವುದಾಗಿ ತಿಳಿಸಿದರು.ರಾಜ್ಯದಲ್ಲಿ ಖಾಲಿ ಇರುವ ಹುದ್ದೆಗಳನ್ನು ತಕ್ಷಣ ಭರ್ತಿ ಮಾಡಿಕೊಳ್ಳದಿದ್ದರೆ ನ್ಯಾಯಾಲದ ಮೊರೆ ಹೋಗಿ ಹೋರಾಟ ಮಾಡುತ್ತೇನೆ ಎಂದು ಎಚ್ಚರಿಸಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.