ಗುರುವಾರ , ಜನವರಿ 23, 2020
28 °C

ಖಾಸಗಿ ಜಮೀನಿಗೆ ಸೌರ ಬೇಲಿಗೆ ಸರ್ಕಾರದ ಸಬ್ಸಿಡಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸುವರ್ಣಸೌಧ (ಬೆಳಗಾವಿ): ಮನುಷ್ಯರು ಮತ್ತು ಪ್ರಾಣಿ ಸಂಘರ್ಷ ತಪ್ಪಿಸುವ ಉದ್ದೇಶದಿಂದ ಖಾಸಗಿ ಜಮೀನುಗಳಲ್ಲಿ ಸೌರ ವಿದ್ಯುತ್‌ ಬೇಲಿ ಹಾಕಲು ಸಬ್ಸಿಡಿ ನೀಡಲಾಗುವುದು ಎಂದು ಅರಣ್ಯ ಸಚಿವ ಬಿ. ರಮಾನಾಥ ರೈ ಸೋಮವಾರ ವಿಧಾನಸಭೆಯಲ್ಲಿ ತಿಳಿಸಿದರು.

ಹೊಳೆನರಸೀಪುರ ಶಾಸಕ ಎಚ್.ಡಿ. ರೇವಣ್ಣ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಹಾಸನ ಜಿಲ್ಲೆಯಲ್ಲಿ ೨೫ ಆನೆಗಳನ್ನು ಹಿಡಿಯಲು ಸುಪ್ರೀಂ ಕೋರ್ಟ್ ಅನುಮತಿ ಸಿಕ್ಕಿದೆ ಎಂದರು.ಮಾನವ-– ಪ್ರಾಣಿ ಸಂಘರ್ಷ ತಪ್ಪಿಸಲು ₨ ೧೦.೫೦ ಕೋಟಿ ಅನು ದಾನ ಬಿಡುಗಡೆ ಮಾಡಲಾಗಿದೆ. ವನ್ಯ ಪ್ರಾಣಿ ಸಂರಕ್ಷಣೆ ಹಾಗೂ ವನ್ಯಧಾಮ ಅಭಿವೃದ್ಧಿಗೆ ಕೊಡಗು, ಮಂಗಳೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮೀಣ, ಕೋಲಾರ, ಮಂಡ್ಯ, ಬೆಳಗಾವಿ, ಚಿಕ್ಕಮಗಳೂರು, ಮೈಸೂರು, ಚಾಮರಾಜನಗರ, ಉತ್ತರ ಕನ್ನಡ, ಶಿವಮೊಗ್ಗ, ಹಾಸನ, ತುಮಕೂರು, ಹಾವೇರಿ, ಗುಲ್ಬರ್ಗ, ಬಳ್ಳಾರಿ, ಧಾರವಾಡ ಜಿಲ್ಲೆಗಳನ್ನು ಆಯ್ಕೆ ಮಾಡಲಾಗಿದೆ ಎಂದರು.ಇ–-ತ್ಯಾಜ್ಯ ವಿಲೇವಾರಿಗೆ 30 ಘಟಕ:  ರಾಜ್ಯದಲ್ಲಿ ಸಂಗ್ರಹವಾಗುವ ಇ–-ತ್ಯಾಜ್ಯಪುನರ್ ಬಳಕೆಗಾಗಿ ೩೦ ಖಾಸಗಿ ಘಟಕಗಳಿಗೆ ಅನುಮತಿ ನೀಡಲಾಗಿದೆ ಎಂದು ಸಚಿವರು ಬಸವನಬಾಗೇವಾಡಿ ಶಾಸಕ ಶಿವಾನಂದ ಪಾಟೀಲರ ಪ್ರಶ್ನೆಗೆ ಉತ್ತರಿಸಿದರು. ರಾಜ್ಯದಲ್ಲಿ ಸುಮಾರು ೯,೧೧೮ ಟನ್ ಇ-–ತ್ಯಾಜ್ಯ ಉತ್ಪಾದನೆಯಾ ಗು ತ್ತಿದೆ. ತ್ಯಾಜ್ಯ ಸಂಗ್ರಹಣೆ ಮಾಡುವುದು ಸ್ಥಳೀಯ ಸಂಸ್ಥೆಗಳ ಕೆಲಸವಾಗಿದೆ ಎಂದರು.ಇ-–ತ್ಯಾಜ್ಯದಿಂದ ಅಮೂಲ್ಯ ಲೋಹಗಳಾದ ಬಂಗಾರ, ಬೆಳ್ಳಿ, ಪ್ಲಾಟಿನಂಗಳನ್ನು ಸಂಗ್ರಹಿಸುವ ಕಾರ್ಯಕ್ಕೆ ರಾಜ್ಯದಲ್ಲಿ ಇನ್ನೂ ಚಾಲನೆ ನೀಡಲಾಗಿಲ್ಲ. ಈ ಬಗ್ಗೆ ಪರಿಶೀಲನೆ ಮಾಡಲಾಗುವುದು ಎಂದರು. ಡೀಮ್ಡ್ ಅರಣ್ಯ ಸಮೀಕ್ಷೆ: ರಾಜ್ಯದಲ್ಲಿ ಡೀಮ್ಡ್ ಅರಣ್ಯ ಸಮೀಕ್ಷೆ ಮಾಡಲಾ ಗುತ್ತಿದ್ದು ಮೀಸಲು ಅರಣ್ಯದಲ್ಲಿ ಒತ್ತುವರಿ ಮಾಡಿಕೊಳ್ಳಲಾದ ದೊಡ್ಡ ಕುಳಗಳನ್ನು ಮೊದಲು ಒಕ್ಕಲೆಬ್ಬಿಸ ಲಾಗುವುದು ಎಂದರು.ಅರಣ್ಯ ಭೂಮಿ ಒತ್ತುವರಿ ಮಾಡಿ ಕೊಂಡಿದ್ದಾರೆ ಎಂದು ಬಡವರಿಗೆ ನೊಟೀಸ್ ನೀಡಲಾಗುತ್ತಿದೆ. ೬೦ ವರ್ಷದಿಂದ ಕೃಷಿ ಮಾಡಿಕೊಂಡು ಬಂದವರಿಗೂ ತೊಂದರೆ ನೀಡಲಾ ಗುತ್ತಿದೆ ಎಂದು ಮಡಿಕೇರಿ ಶಾಸಕ ಅಪ್ಪಚ್ಚು ರಂಜನ್ ಹಾಗೂ ಇತರರು ಆಕ್ಷೇಪ ವ್ಯಕ್ತಪಡಿಸಿದರು.

ಇದಕ್ಕೆ ಉತ್ತರ ನೀಡಿದ ಸ್ಪೀಕರ್ ಕಾಗೋಡು ತಿಮ್ಮಪ್ಪ ‘ಯಾಕೆ ಹೆದರು ತ್ತೀರಿ. ನೀವು ಅರ್ಜಿ ಕೊಟ್ಟು ಸ್ವೀಕಾರ ಪತ್ರ ಪಡೆಯಿರಿ. ಯಾರೂ ಏನೂ ಮಾಡಲು ಸಾಧ್ಯವಿಲ್ಲ’ ಎಂದರು.ವಿರೋಧ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಮಾತ ನಾಡಿ, ೧೯೯೭–-೯೮ರಲ್ಲಿಯೇ ೯೫00 ಸಾವಿರ ಹೆಕ್ಟೇರ್ ಪ್ರದೇಶ ಅರಣ್ಯ ಇಲಾಖೆಯಿಂದ ಕಂದಾಯ ಇಲಾಖೆಗೆ ವರ್ಗಾವಣೆಯಾಗಬೇಕಿತ್ತು. ಇನ್ನೂ ಆಗಿಲ್ಲ ಎಂದರು. ಎಲ್ಲವನ್ನೂ ಸರಿಪಡಿ ಸಲು ಕ್ರಮ ಕೈಗೊಳ್ಳುವುದಾಗಿ ಸಚಿವರು ಭರವಸೆ ನೀಡಿದರು.

ಪ್ರತಿಕ್ರಿಯಿಸಿ (+)