ಖಾಸಗಿ ಜಾಗದಲ್ಲಿ ಸರ್ಕಾರಿ ಕಾಲೇಜು ಕಟ್ಟಡ ನಿರ್ಮಾಣ!

7

ಖಾಸಗಿ ಜಾಗದಲ್ಲಿ ಸರ್ಕಾರಿ ಕಾಲೇಜು ಕಟ್ಟಡ ನಿರ್ಮಾಣ!

Published:
Updated:

ಭಾಲ್ಕಿ: ಕರ್ನಾಟಕ- ಮಹಾರಾಷ್ಟ್ರದ ಗಡಿ ಭಾಗದ ಮಕ್ಕಳ ಉನ್ನತ ಶಿಕ್ಷಣಕ್ಕೆ ಅನುಕೂಲವಾಗಲಿ ಎಂದು ಸರ್ಕಾರವು ಭಾಲ್ಕಿ ತಾಲ್ಲೂಕಿನ ಮೆಹಕರ್ ಗ್ರಾಮದಲ್ಲಿ 34 ಲಕ್ಷ ರೂಪಾಯಿ ವೆಚ್ಚದಲ್ಲಿ  ನಿರ್ಮಿಸಿರುವ ಪದವಿ ಪೂರ್ವ ಕಾಲೇಜು ಕಟ್ಟಡ ಪೂರ್ಣಗೊಂಡು ಎರಡು ವರ್ಷಗಳು ಕಳೆದಿವೆ. ಆದರೆ ಸ್ಥಳದ ಕುರಿತ  ವಿವಾದದಿಂದಾಗಿ ಕಾಲೇಜು ಸ್ವಂತ ಕಟ್ಟಡಕ್ಕೆ ಇನ್ನೂ ಸ್ಥಳಾಂತರಗೊಂಡಿಲ್ಲ. ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ್ಲ್ಲಲೇ ಪದವಿ ಪೂರ್ವ ತರಗತಿಗಳು ನಡೆಯುತ್ತಿವೆ. ಸರ್ಕಾರಿ ಜಾಗ ಎಂದು ಯಾರೋ ತೋರಿಸಿದ ಸ್ಥಳದಲ್ಲಿ ಕಟ್ಟಡ ನಿರ್ಮಾಣಗೊಂಡಿದೆ. ಇದು ಖಾಸಗಿಯವರಿಗೆ ಸೇರಿದ ಜಮೀನು ಎಂಬುದು ಅನಂತರ ಗೊತ್ತಾಗಿದೆ. ಹೀಗಾಗಿ ಕಾಲೇಜು ಕಟ್ಟಡ ಹಸ್ತಾಂತರ ಆಗಲು ತೊಂದರೆಯಾಗಿದೆ ಎಂದು ಪ್ರಾಚಾರ್ಯರು ಹೇಳುತ್ತಾರೆ.ಮೆಹಕರ್‌ನಿಂದ ಅಳವಾಯಿ ಮಾರ್ಗದಲ್ಲಿ ಸುಮಾರು ಒಂದು ಎಕರೆ ಜಾಗದಲ್ಲಿ 7 ಕೊಠಡಿಗಳು, ಶೌಚಾಲಯ ಸೌಲಭ್ಯ ಇರುವ ಕಾಲೇಕು ಕಟ್ಟಡ ನಿರ್ಮಾಣಗೊಂಡಿದೆ. ಕೊಳವೆಬಾವಿ ಕೊರೆದಿದ್ದು, ಗೇಟ್ ಅಳವಡಿಸಲಾಗಿದೆ. ಸುಣ್ಣ ಬಣ್ಣ ಬಳಿಯಲಾಗಿದೆ. ಆದರೆ ಅದು ವಿದ್ಯಾರ್ಥಿಗಳ ಉಪಯೋಗಕ್ಕೆ ಬಾರದಂತಾಗಿದೆ. ಕೂಡಲೇ ಸರ್ಕಾರದ ಅಧಿಕಾರಿಗಳು, ಜನಪ್ರತಿನಿಧಿಗಳು, ಮೆಹಕರ್ ಗ್ರಾಮ ಪಂಚಾಯಿತಿಯ ಮುಖಂಡರು ಕೂಡಿಕೊಂಡು ಪರಸ್ಪರ ಚರ್ಚಿಸಿ ಇದಕ್ಕೊಂದು ಪರಿಹಾರ ಕಂಡುಕೊಳ್ಳುವ ಅಗತ್ಯವಿದೆ ಎಂದು ಪಾಲಕರು ಹೇಳುತ್ತಾರೆ.ಈ ಬಗ್ಗೆ ಈಗಾಗಲೇ ಜಿಲ್ಲಾ ಪಂಚಾಯಿತಿಗೆ ಮತ್ತು ಸರ್ಕಾರಕ್ಕೆ ಪತ್ರ ಬರೆಯಲಾಗಿದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಸಯ್ಯದ್ ಕಾಸಿಂ ಅಲಿ ತಿಳಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry