ಸೋಮವಾರ, ಜೂನ್ 21, 2021
20 °C

ಖಾಸಗಿ ಬಸ್ ಡಿಕ್ಕಿ; ಸಾರ್ವಜನಿಕರಿಂದ ಬಸ್‌ಗಳಿಗೆ ಬೆಂಕಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಳವಳ್ಳಿ: ಶಾಲಾ ಮಕ್ಕಳಿಬ್ಬರು ರಸ್ತೆ ದಾಟುವಾಗ ಖಾಸಗಿ ಬಸ್ಸು ಡಿಕ್ಕಿ ಹೊಡೆದ ಪರಿಣಾಮ ತೀವ್ರಗಾಯಗೊಂಡಿದ್ದು, ಇದರಿಂದ ರೊಚ್ಚಿಗೆದ್ದ ಸಾರ್ವಜನಿಕರು ಎರಡು ಖಾಸಗಿ ಬಸ್ಸುಗಳಿಗೆ ಬೆಂಕಿ ಹಚ್ಚಿದ ಘಟನೆ ತಾಲ್ಲೂಕಿನ ಕಾಗೆಪುರ ಗ್ರಾಮದಲ್ಲಿ ಸೋಮವಾರ ಸಂಜೆ ನಡೆದಿದೆ.ಸಾರ್ವಜನಿಕರನ್ನು ಚದುರಿಸಲು ಪೊಲೀಸರು ಲಾಠಿಪ್ರಹಾರ, ಅಶ್ರುವಾಯು ಸಿಡಿಸಿದರು.

ಮದ್ದೂರು ತಾಲ್ಲೂಕಿನ ಬಿದರಹಳ್ಳಿಯ ರಮೇಶ್ ಎಂಬುವರ ಮಕ್ಕಳಾದ ಪ್ರಜ್ವಲ್ ಹಾಗೂ ಪ್ರಕೃತಿ ಅಣ್ಣತಂಗಿಯಾಗಿದ್ದು, ಭಾರತಿನಗರದ ಚಾಂಷುಗರ್ಸ್‌ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಮಳವಳ್ಳಿ ತಾಲ್ಲೂಕಿನ ತಳಗವಾದಿಯಲ್ಲಿ ಮಕ್ಕಳ ಸೋದರ ಮಾವನ ಮದುವೆಯಾಗಿದ್ದು, ಮಂಗಳವಾರ ಹಮ್ಮಿಕೊಂಡಿದ್ದ ಬೀಗರ ಊಟಕ್ಕೆ ಮಕ್ಕಳು ಶಾಲಾ ಮುಗಿಸಿ ಬಸ್ಸಿನಲ್ಲಿ ಬಂದು ಕಾಗೆಪುರದ ಬಳಿ ಇಳಿದು ರಸ್ತೆ ದಾಟುವಾಗ ಮಳವಳ್ಳಿಯಿಂದ ಬೆಂಗಳೂರಿಗೆ ಹೋಗುತ್ತಿದ್ದ ಖಾಸಗಿ ಬಸ್ಸು ಡಿಕ್ಕಿಹೊಡೆದಿದೆ.

 

ಪರಿಣಾಮ ಇಬ್ಬರು ಮಕ್ಕಳು ತೀವ್ರಗಾಯಗೊಂಡು ಮಕ್ಕಳ ಸ್ಥಿತಿ ಚಿಂತಾಜನಕವಾಗಿತು ಎಂಬುದು ಪ್ರತ್ಯಕ್ಷದರ್ಶಿಗಳು ತಿಳಿಸಿದರು. ತಕ್ಷಣ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗೆ ಮಂಡ್ಯದ ಆಸ್ಪತ್ರೆಗೆ ಕರೆ ದೊಯ್ಯಲಾಗಿದೆ.ರೊಚ್ಚಿಗೆದ್ದ ಸಾರ್ವಜನಿಕರು: ಅಪಘಾತದಿಂದ ಮಕ್ಕಳು ಗಾಯಗೊಂಡ ಹಿನ್ನೆಲೆಯಲ್ಲಿ ರೊಚ್ಚಿಗೆದ್ದ ಸಾರ್ವಜನಿಕರು ಅಪಘಾತ ಮಾಡಿದ ಹಾಗೂ ಬೆಂಗಳೂರಿನಿಂದ ಮಳವಳ್ಳಿಗೆ ಬರುತ್ತಿದ್ದ ಇನ್ನೊಂದು ಬಸ್ಸಿಗೂ ಬೆಂಕಿ ಹಚ್ಚಿದ್ದು, ಎರಡು ಬಸ್ಸುಗಳು ಸಂಪೂರ್ಣ ಸುಟ್ಟುಹೋಗಿದೆ.ಲಘು ಲಾಠಿಪ್ರಹಾರ: ಸಾರ್ವಜನಿಕರು ಸೂಕ್ತ ಪರಿಹಾರ ನೀಡಬೇಕು ಎಂದು ಒತ್ತಾಯಿಸಿ ರಸ್ತೆ ಮಧ್ಯೆ ಕುಳಿತು ಪ್ರತಿಭಟನೆ ನಡೆಸಲು ಮುಂದಾದರು. ಪ್ರತಿಭಟನೆ ಕೈಬಿಡುವಂತೆ ಸ್ಥಳದಲ್ಲಿದ್ದ ಡಿವೈಎಸ್ಪಿ ಎಂ.ಕೆ.ಉತ್ತಪ್ಪ ಹಾಗೂ ಸಿಬ್ಬಂದಿಯವರು ಮನವೊಲಿಸಲು ಯತ್ನಿಸಿದರೂ ಪ್ರಯೋಜನವಾಗಲಿಲ್ಲ. ಬಳಿಕ ಪರಿಸ್ಥಿತಿ ವಿಕೋಪಕ್ಕೆ ಹೋದ ಹಿನ್ನೆಲೆಯಲ್ಲಿ ಸ್ಥಳದಲ್ಲಿದ್ದ ಪೊಲೀಸರು ಸಾರ್ವಜನಿಕರನ್ನು ಚದುರಿಸಲು ಲಾಠಿ ಪ್ರಹಾರ ಮಾಡಿ, ಅಶ್ರುವಾಯು ಸಿಡಿಸಿ ಸಾರ್ವಜನಿಕರನ್ನು ಚದುರಿಸಲು ಯತ್ನಿಸಿದರು.ನಂತರ ಪುನಃ ರಸ್ತೆ ಮಧ್ಯೆ ಬಂದು ಕುಳಿತು ಪ್ರತಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಸ್ಥಳಕ್ಕೆ ಬಂದ ಜಿಲ್ಲಾಧಿಕಾರಿ ಡಾ.ಪಿ.ಸಿ.ಜಾಫರ್ ನಿಷೇಧಾಜ್ಞೆ ಜಾರಿಗೊಳಿಸಿದರು.ಘಟನೆಯ ಹಿನ್ನೆಲೆಯಲ್ಲಿ 18 ಮಂದಿಯನ್ನು ಬಂಧಿಸಲಾಗಿದೆ. ಎಸ್ಪಿ ಕೌಶಲೇಂದ್ರಕುಮಾರ್, ಅಡಿಷನಲ್ ಎಸ್ಪಿ ರಾಜಣ್ಣ ಇದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.