ಬುಧವಾರ, ಮಾರ್ಚ್ 3, 2021
19 °C

ಖಾಸಗಿ ವಲಯದಲ್ಲಿ ಮೀಸಲಾತಿ, ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಖಾಸಗಿ ವಲಯದಲ್ಲಿ ಮೀಸಲಾತಿ, ಪ್ರತಿಭಟನೆ

ಹಾಸನ: ‘ಖಾಸಗಿ ವಲಯದಲ್ಲೂ ಹಿಂದುಳಿದ ವರ್ಗ, ಪರಿಶಿಷ್ಟ ಪಂಗಡ ಹಾಗೂ ಜಾತಿಗಳಿಗೆ ಮೀಸಲಾತಿ ನಿಗದಿ ಮಾಡಬೇಕು’ ಎಂದು ಒತ್ತಾಯಿಸಿ ಬಹುಜನ ವಿದ್ಯಾರ್ಥಿ ಸಂಘ (ಬಿವಿಎಸ್) ಕಾರ್ಯಕರ್ತರು ಗುರುವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.ನಗರದ ಹೇಮಾವತಿ ಪ್ರತಿಮೆಯಿಂದ ಮೆರವಣಿಗೆಯಲ್ಲಿ ಬಂದ ಪ್ರತಿಭಟನಾಕಾರರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಘೋಷಣೆ ಕೂಗಿದರು.

‘ಹಿಂದುಳಿದ ವರ್ಗಗಳಿಗೆ ಸರ್ಕಾರಿ ವಲಯದಲ್ಲಿ ಮೀಸಲಾತಿ ನೀಡಲಾಗಿದೆ. ಆದರೆ ಇತ್ತೀಚಿನ ದಿನಗಳಲ್ಲಿ ಆ ಕ್ಷೇತ್ರದಲ್ಲಿ ಯಾವುದೇ ಹುದ್ದೆಗೆ ನೇಮಕಾತಿ ಆಗುತ್ತಿಲ್ಲ.  ಬಂಡವಾಳಶಾಹಿಗಳಿಗೆ ಮನ್ನಣೆ ನೀಡುತ್ತಿರುವ ಸರ್ಕಾರಗಳು ಉದ್ಯೋಗ ಹಂಚಿಕೆಯಲ್ಲಿ ತಾರತಮ್ಯ ಎಸಗುತ್ತಿವೆ. ಖಾಸಗಿ ಕ್ಷೇತ್ರದ ಮೀಸಲಾತಿ ಪರಾಮರ್ಶೆಯನ್ನು  ಮಾಡಬೇಕು’ ಎಂದು ಅವರು ಒತ್ತಾಯಿಸಿದರು.‘ರಾಜ್ಯ ಸರ್ಕಾರ ಲೋಕೋಪಯೋಗಿ, ಅಬಕಾರಿ, ನೀರಾವರಿ, ಅರಣ್ಯ, ಪ್ರವಾಸೋದ್ಯಮ ಮುಂತಾದ ಕ್ಷೇತ್ರಗಳಲ್ಲಿ ನೀಡುತ್ತಿರುವ ಗುತ್ತಿಗೆ ಕೆಲಸದಲ್ಲಿ ಹಿಂದುಳಿದವರಿಗೆ ಆದ್ಯತೆ ನೀಡಬೇಕು. ವಿದ್ಯಾರ್ಥಿನಿಲಯದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಊಟದ ಭತ್ಯೆಯನ್ನು ₹ 35 ರಿಂದ ₹ 75ಕ್ಕೆ ಹೆಚ್ಚಿಸಬೇಕು ಎಂದು ಆಗ್ರಹಪಡಿದ್ದಾರೆ. ಖಾಲಿಯಿರುವ ಬ್ಯಾಕ್‌ಲಾಗ್ ಹುದ್ದೆಗಳನ್ನು ಭರ್ತಿ ಮಾಡಬೇಕು. ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುವ ಗುತ್ತಿಗೆ ಆಧಾರದ ನೌಕರರನ್ನು ಕಾಯಂ ಮಾಡಿಕೊಳ್ಳಬೇಕು. ಪರಿಶಿಷ್ಟ ಜಾತಿ ಹಾಗೂ ಪಂಗಡಕ್ಕೆ ಸೇರಿದ ಮಕ್ಕಳ ವಿದ್ಯಾಭ್ಯಾಸ ಗುಣಮಟ್ಟಕ್ಕಾಗಿ ವಿವಿಧ ಯೋಜನೆಗಳನ್ನು ರೂಪಿಸಬೇಕು. ಈ ಎಲ್ಲ ಸಮಸ್ಯೆಗಳ ಈಡೇರಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಗಮನ ಹರಿಸಬೇಕು ಎಂದು ಬೇಡಿಕೆ ಮಂಡಿಸಿದರು.ಈ ಬೇಡಿಕೆಗಳಿಗೆ ಸ್ಪಂದಿಸದೇ ಇದ್ದಲ್ಲಿ ಫೆ. 3ರಿಂದ ಬೆಂಗಳೂರಿನಲ್ಲಿ ನಡೆಯುವ ವಿಶ್ವ ಬಂಡವಾಳ ಹೂಡಿಕೆದಾರರ ಸಮಾವೇಶದ ಜಾಗದಲ್ಲಿ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಎಚ್ಚರಿಸಿದರು.ಬಿವಿಎಸ್ ಜಿಲ್ಲಾ ಘಟಕ ಸಂಯೋಜಕ ಎಂ.ಎಸ್. ಯೋಗೇಶ್, ಮಧು, ರಮೇಶ್ ಇತರರು ಪ್ರತಿಭಟನೆಯಲ್ಲಿ ಇದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.