ಖಾಸಗಿ ವಿವಿ: ಎಬಿವಿಪಿ ಪ್ರತಿಭಟನೆ

7

ಖಾಸಗಿ ವಿವಿ: ಎಬಿವಿಪಿ ಪ್ರತಿಭಟನೆ

Published:
Updated:

ವಿಜಾಪುರ: ರಾಜ್ಯದಲ್ಲಿ ಸ್ಥಾಪಿಸಲು ಉದ್ದೇಶಿಸಿರುವ ಖಾಸಗಿ ವಿಶ್ವವಿದ್ಯಾಲಯಗಳಿಗೆ ಸ್ಪಷ್ಟ ಮಾರ್ಗಸೂಚಿ ರೂಪಿಸಲು ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ನವರು ಸೋಮವಾರ ಇಲ್ಲಿ ಪ್ರತಿಭಟನೆ ನಡೆಸಿದರು.ಇಲ್ಲಿಯ ಸಿದ್ಧೇಶ್ವರ ದೇವಸ್ಥಾನದಿಂದ ಜಿಲ್ಲಾಧಿಕಾರಿಗಳ ಕಚೇರಿ ವರೆಗೆ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಸಂಘಟನೆಯ ನಗರ ಕಾರ್ಯದರ್ಶಿ ಶರತ್ ಬಿರಾದಾರ, ಉನ್ನತ ಶಿಕ್ಷಣದ ವ್ಯಾಪಾರೀಕರಣ ತಡೆಯಲು ಸರ್ಕಾರ ಸ್ಪಷ್ಟವಾದ ಮಾರ್ಗಸೂಚಿ ರೂಪಿಸಬೇಕು ಎಂದು ಆಗ್ರಹಿಸಿದರು.ನಗರ ಸಂಘಟನಾ ಕಾರ್ಯದರ್ಶಿ ಬಸವರಾಜ ಹಳ್ಳಿ, ರಾಜ್ಯದಲ್ಲಿ ಪ್ರಸ್ತುತ ಅಸ್ತಿತ್ವದಲ್ಲಿರುವ ಖಾಸಗಿ ವಿವಿಗಳಲ್ಲಿ ಮೊದಲಿಗೆ ಮಾರ್ಗಸೂಚಿ ರೂಪಿಸಬೇಕು ಎಂದು ಒತ್ತಾಯಿಸಿದರು. ಹೋರಾಟದ ನೇತೃತ್ವವನ್ನು ಗಿರೀಶ್ ಸರಾವರೆ, ಪ್ರೇಮ್ ಬಿರಾದಾರ, ನಿಖಿಲ್ ಜಹಗೀರದಾರ, ಮಡಿವಾಳಯ್ಯ ಹಿರೇಮಠ, ಶ್ವೇತಾ, ವಿನೋದ ಇತರರು ವಹಿಸಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry