ಭಾನುವಾರ, ಮೇ 16, 2021
22 °C

ಖಾಸಗಿ ಶಾಲೆ, ಅನುದಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚನ್ನರಾಯಪಟ್ಟಣ: `ಹಲವು ವರ್ಷಗಳಿಂದ ಉತ್ತಮ ಸೇವೆ ನೀಡುತ್ತಿರುವ ಖಾಸಗಿ ಶಾಲೆಗಳಿಗೆ ಸರ್ಕಾರ ಕೂಡಲೇ ಅನುದಾನ ನೀಡಬೇಕು~ ಎಂದು ವಿಧಾನ ಪರಿಷತ್ ಸದಸ್ಯ ಮರಿತಿಬ್ಬೇಗೌಡ ಆಗ್ರಹಿಸಿದರು.ಸಾರ್ವಜನಿಕ ಶಿಕ್ಷಣ ಇಲಾಖೆ, ತಾ.ಪಂ. ಮತ್ತು ಜಿ.ಪಂ. ಸಂಯುಕ್ತಾಶ್ರಯದಲ್ಲಿ ಪಟ್ಟಣದಲ್ಲಿ ಬುಧವಾರ ಏರ್ಪಡಿಸಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, `ದೇಶದ ಸಮಗ್ರ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಮುಖ್ಯವಾದುದು. ಆದರೆ ಅನೇಕ ವರ್ಷಗಳಿಂದ ಖಾಸಗಿ ಶಾಲೆಗಳಿಗೆ ಸರ್ಕಾರ ಅನುದಾನ ನೀಡುತ್ತಿಲ್ಲ. ಮೂರು ವರ್ಷ ಹಿಂದೆ ಅನುದಾನ ನೀಡುವ ಬಗ್ಗೆ ನಿರ್ಧಾರ ಕೈಗೊಂಡಿದ್ದರೂ ಅದು ಅನುಷ್ಠಾನಗೊಂಡಿಲ್ಲ~ ಎಂದರು.ಶಿಕ್ಷಕರನ್ನು ಇತರೆ ಯೋಜನೆಗಳ ಕಾರ್ಯಗಳಿಗೆ ನಿಯೋಜಿಸಲಾಗುತ್ತಿದೆ. ಬಿಸಿಯೂಟದ ಹೊಣೆ ವಹಿಸಲಾಗಿದೆ.  ಗ್ರಾಮೀಣ ಮಟ್ಟದಲ್ಲಿ ಮತ್ತಷ್ಟು ಸರ್ಕಾರಿ ಶಾಲಾ- ಕಾಲೇಜುಗಳನ್ನು ತೆರೆದು ಅಗತ್ಯ ಶಿಕ್ಷಕರನ್ನು ನೇಮಿಸಬೇಕೆಂದು ಅವರು ಒತ್ತಾಯಿಸಿದರು.ಜಿ.ಪಂ. ಅಧ್ಯಕ್ಷ ಬಿ.ಡಿ.ಚಂದ್ರೇಗೌಡ ಕಾರ್ಯಕ್ರಮ ಉದ್ಘಾಟಿಸಿದರು. ಶಾಸಕ ಸಿ.ಎಸ್. ಪುಟ್ಟೇಗೌಡ, ಎಚ್‌ಡಿಸಿಸಿ ಬ್ಯಾಂಕ್ ಸಿ.ಎನ್. ಬಾಲಕೃಷ್ಣ, ತಾ.ಪಂ. ಅಧ್ಯಕ್ಷೆ ವಿಜಯಶಿವಲಿಂಗಪ್ಪ, ಪುರಸಭಾಧ್ಯಕ್ಷೆ ಅನುಸೂಯ ಪ್ರಕಾಶ್, ಸರ್ಕಾರಿ ನೌಕರ ಸಂಘದ ಅಧ್ಯಕ್ಷ ಎಚ್.ಎನ್. ಲೋಕೇಶ್ ಇತರರು ಇದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.