ಖಾಸಗಿ ಶಾಲೆ ಮೋಹ ತೊರೆಯಿರಿ

ಗುರುವಾರ , ಜೂಲೈ 18, 2019
24 °C

ಖಾಸಗಿ ಶಾಲೆ ಮೋಹ ತೊರೆಯಿರಿ

Published:
Updated:

ಚಿಕ್ಕಬಳ್ಳಾಪುರ: ಖಾಸಗಿ ಶಾಲೆಗಳ ಕುರಿತ ವ್ಯಾಮೋಹ, ಭ್ರಮೆಯನ್ನು ತ್ಯಜಿಸಿ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಕಳುಹಿಸಿ. ಸರ್ಕಾರಿ ಶಾಲೆಗಳಲ್ಲೂ ಉತ್ತಮ ಸೌಕರ್ಯಗಳು ದೊರೆಯುತ್ತಿವೆ ಎಂದು ಶಾಸಕ ಕೆ.ಪಿ.ಬಚ್ಚೇಗೌಡ ತಿಳಿಸಿದರು.ತಾಲ್ಲೂಕಿನ ಮಂಡಿಕಲ್ಲು ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ಸೋಮವಾರ 11 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗಿರುವ ಶಾಲೆಯ ಕೊಠಡಿಗಳನ್ನು ಉದ್ಘಾಟಿಸಿ ಮಾತನಾಡಿದ ಅವರು, `ಸರ್ಕಾರಿ ಶಾಲೆಗಳಲ್ಲಿನ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು~ ಎಂದರು.ಸರ್ಕಾರಿ ಶಾಲೆಗಳಲ್ಲಿ ಬಿಸಿಯೂಟ, ಉಚಿತ ಸಮವಸ್ತ್ರ, ವಿದ್ಯಾರ್ಥಿ ವೇತನ ಮುಂತಾದ ಸೌಕರ್ಯಗಳನ್ನು ಕಲ್ಪಿಸಲಾಗಿದೆ. ಬಡ ಮತ್ತು ನಿರ್ಗತಿಕ ಮಕ್ಕಳನ್ನು ಉದ್ದೇಶಿಸಿ ಈ ಸೌಕರ್ಯಗಳನ್ನು ಕಲ್ಪಿಸಲಾಗಿದ್ದು, ಅರ್ಹರು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಅವರು ತಿಳಿಸಿದರು.ಜಿಲ್ಲಾ ಪಂಚಾಯಿತಿ ಸದಸ್ಯ ಪಿ.ಎನ್.ಮುನೇಗೌಡ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಮಂಜುಳಾ, ಉಪಾಧ್ಯಕ್ಷ ವೆಂಕಟನಾರಾಯಣಪ್ಪ, ಸದಸ್ಯ ಗೋವಿಂದಪ್ಪ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲಕ್ಷ್ಮಿದೇವಮ್ಮ, ಕ್ಷೇತ್ರ ಶಿಕ್ಷಣಾಧಿಕಾರಿ ರಘುನಾಥರೆಡ್ಡಿ, ಮುಖ್ಯೋಪಾಧ್ಯಾಯ ಕೃಷ್ಣಮೂರ್ತಿ, ಮುಖಂಡರಾದ ಜಯಮ್ಮ, ವೆಂಕಟರೆಡ್ಡಿ, ರಾಮಕೃಷ್ಣ, ಬೈರಾರೆಡ್ಡಿ ಮತ್ತಿತರರು ಹಾಜರಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry