ಖುರ್ಷಿದ್ ಪತ್ನಿ ವಿರುದ್ಧ ಪ್ರಕರಣ ದಾಖಲು

7

ಖುರ್ಷಿದ್ ಪತ್ನಿ ವಿರುದ್ಧ ಪ್ರಕರಣ ದಾಖಲು

Published:
Updated:

ಮೈನ್‌ಪುರಿ, ಉತ್ತರಪ್ರದೇಶ (ಪಿಟಿಐ): ವಿದೇಶಾಂಗ ಖಾತೆಯ ಸಚಿವ ಸಲ್ಮಾನ್ ಖುರ್ಷಿದ್ ಅವರ ಪತ್ನಿ ಲೂಯಿಸ್ ಖುರ್ಷಿದ್ ಮತ್ತು ಇತರರ ವಿರುದ್ಧ ಕೊಲೆ ಯತ್ನ ಸೇರಿದಂತೆ ಹಲವು ಆಪಾದನೆಗಳ ಬಗ್ಗೆ ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ದಾಖಲಿಸಲಾಗಿದೆ.ಲೂಯಿಸ್ ಅವರ ಬೆಂಬಲಿಗರು ಆಮ್ ಆದ್ಮಿ ಪಕ್ಷದ ಕಾರ್ಯಕರ್ತನನ್ನು ಥಳಿಸಿದ್ದ ಹಿನ್ನೆಲೆಯಲ್ಲಿ ಪಕ್ಷದ ಜಿಲ್ಲಾಧ್ಯಕ್ಷ ವಿವೇಕ್ ಯಾದವ್ ಅವರು ದೂರು ನೀಡಿರುವುದರಿಂದ ಲೂಯಿಸ್ ಹಾಗೂ ಇತರ 10 ಮಂದಿಯ ವಿರುದ್ಧ ಕೊಲೆ ಯತ್ನ, ಲೂಟಿ, ದರೋಡೆ ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry