ಬೆಂಗಳೂರು:  ಖೋಟಾ ನೋಟು ಚಲಾವಣೆ ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸಿರುವ ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು ಒಂದು ಲಕ್ಷ ರೂಪಾಯಿ ಮೌಲ್ಯದ ಖೋಟಾ ನೋಟುಗಳನ್ನು ವಶಪಡಿಸಿಕೊಂಡಿದ್ದಾರೆ.

ರಾಜಸ್ತಾನ ಮೂಲದ ಶರವಣ್ಸಿಂಗ್ (23) ಮತ್ತು ದಲಪತ್ಸಿಂಗ್ (30) ಬಂಧಿತರು. ಆರೋಪಿಗಳಿಂದ 500 ರೂಪಾಯಿ ಮುಖಬೆಲೆಯ 200 ಖೋಟಾ ನೋಟುಗಳನ್ನು ಜಪ್ತಿ ಮಾಡಲಾಗಿದೆ.

ಆರೋಪಿಗಳು 70 ಸಾವಿರ ರೂಪಾಯಿ ಅಸಲಿ ನೋಟುಗಳಿಗೆ ಒಂದು ಲಕ್ಷ ರೂಪಾಯಿ ಖೋಟಾ ನೋಟು ಕೊಡುತ್ತಿದ್ದರು. ಏಳೆಂಟು ತಿಂಗಳುಗಳಿಂದ ನಗರದಲ್ಲಿದ್ದ ಅವರು ಚಿಕ್ಕಪೇಟೆ ಹಾಗೂ ಸುಲ್ತಾನ್ ಪೇಟೆಯಲ್ಲಿ ಅಂಗಡಿಗಳನ್ನು ಇಟ್ಟುಕೊಂಡು ಎಲೆಕ್ಟ್ರಾನಿಕ್ಸ್ ವಸ್ತುಗಳನ್ನು ಮಾರಾಟ ಮಾಡುತ್ತಿದ್ದರು. ಅವರಿಗೆ ರಾಜಸ್ತಾನ ಮೂಲದ ವ್ಯಕ್ತಿಯೊಬ್ಬ ಖೋಟಾ ನೋಟು ಸರಬರಾಜು ಮಾಡುತ್ತಿದ್ದ ಎಂದು ತನಿಖೆಯಿಂದ ಗೊತ್ತಾಗಿದೆ. ಆ ವ್ಯಕ್ತಿ ತಲೆಮರೆಸಿಕೊಂಡಿದ್ದು, ಪತ್ತೆ ಕಾರ್ಯ ಮುಂದುವರಿದಿದೆ ಎಂದು ಪೊಲೀಸರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.