ಭಾನುವಾರ, ಏಪ್ರಿಲ್ 11, 2021
23 °C

ಗಗನಸಖಿ ಸಾವು: ಕಾಂಡಾ ವಿರುದ್ಧ ಜಾಮೀನು ರಹಿತ ವಾರೆಂಟ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸಿರ್ಸಾ /ನವದೆಹಲಿ (ಪಿಟಿಐ): ಮಾಜಿ ಗಗನಸಖಿ ಗೀತಿಕಾ ಶರ್ಮಾ ಆತ್ಮಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿರುವ ಹರಿಯಾಣದ ಮಾಜಿ ಸಚಿವ ಗೋಪಾಲ್ ಗೋಯಲ್ ಕಾಂಡಾ ಅವರ ವಿರುದ್ಧ ದೆಹಲಿ ನ್ಯಾಯಾಲಯ ಗುರುವಾರ ಜಾಮೀನು ರಹಿತ ವಾರೆಂಟ್ ಹೊರಡಿಸಿದೆ.ಹೆಚ್ಚುವರಿ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಡಿ.ಕೆ.ಜಂಗಲ ಅವರು ಮಾಜಿ ಸಚಿವರ ವಿರುದ್ಧ ಜಾಮೀನುರಹಿತ ವಾರೆಂಟ್ ಹೊರಡಿಸಿ ಆದೇಶಿಸಿದ್ದಾರೆ.ನ್ಯಾಯಾಲಯದ ಎದುರು ದೆಹಲಿ ಪೊಲೀಸರು `ಆರೋಪಿ ಕಾಂಡಾ ಅವರನ್ನು ಇನ್ನೂ ಬಂಧಿಸಬೇಕಿದೆ~ ಎಂಬ ಹೇಳಿಕೆ ನೀಡಿದ ನಂತರ ನ್ಯಾಯಾಲಯ ಜಾಮೀನು ರಹಿತ ವಾರೆಂಟ್ ನೀಡಿದೆ.ಈ ನಡುವೆ ಕಾಂಡಾ ನಿರೀಕ್ಷಣಾ ಜಾಮೀನಿಗಾಗಿ ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್ ಆದೇಶವನ್ನು ಕಾಯ್ದಿರಿಸಿದೆ.ಏತನ್ಮಧ್ಯೆ ಬುಧವಾರ ತಡರಾತ್ರಿ ದೆಹಲಿ ಪೊಲೀಸರು ಹರಿಯಾಣದ ಸಿರ್ಸಾದಲ್ಲಿರುವ ಮಾಜಿ ಸಚಿವರ ಮನೆಯ ಮೇಲೆ ದಾಳಿ ನಡೆಸಿದ್ದಾರೆ. ವದಂತಿಗಳ ಪ್ರಕಾರ ಕಾಂಡಾ ನೇಪಾಳಕ್ಕೆ ಹೋಗಿರುವ ಸಾಧ್ಯತೆ ಇದೆ ಎನ್ನಲಾಗಿದೆ.

 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.