ಭಾನುವಾರ, ಮೇ 9, 2021
19 °C

ಗಗನ್‌ದೀಪ್‌ಗೆ ಬಡ್ತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಹಿರಿಯ ಐಪಿಎಸ್ ಅಧಿಕಾರಿ ಕೆ.ವಿ.ಗಗನ್‌ದೀಪ್ ಅವರಿಗೆ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಹುದ್ದೆಗೆ ಬಡ್ತಿ ನೀಡಿ, ಕಾರಾಗೃಹಗಳ ಎಡಿಜಿಪಿ ಮತ್ತು ಐಜಿಪಿ ಆಗಿ ವರ್ಗಾವಣೆ ಮಾಡಲಾಗಿದೆ.ಮೊಹಮದ್ ವಜೀರ್ ಅಹಮದ್ ಅವರನ್ನು ಈಶಾನ್ಯ ವಲಯದ ಐಜಿಪಿಯಾಗಿ ಗುಲ್ಬರ್ಗಕ್ಕೆ ವರ್ಗಾವಣೆ ಮಾಡಲಾಗಿದೆ. ಚುನಾವಣಾ ಆಯೋಗದ ಅನುಮತಿ ಪಡೆದೇ ಈ ವರ್ಗಾವಣೆಗಳನ್ನು ಸರ್ಕಾರ ಮಾಡಿದೆ.

ಐಎಎಸ್ ಅಧಿಕಾರಿಯಾದ ಗುಲ್ಬರ್ಗ ಮಹಾನಗರ ಪಾಲಿಕೆ ಆಯುಕ್ತ ಮನೋಜ್ ಜೈನ್ ಅವರನ್ನು ರಾಯಚೂರು ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ.ಐಎಫ್‌ಎಸ್ ಅಧಿಕಾರಿ ಕೆ.ಎಂ.ನಾರಾಯಣಸ್ವಾಮಿ ಅವರನ್ನು ವಿಜಾಪುರ ಜಿಲ್ಲಾ ಪಂಚಾಯಿತಿ ಉಪ ಅರಣ್ಯ ಸಂರಕ್ಷಣಾಧಿಕಾರಿಯಾಗಿ ನೇಮಕ ಮಾಡಲಾಗಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.