ಬುಧವಾರ, ಜೂನ್ 23, 2021
28 °C

ಗಡಿ ಪ್ರದೇಶದ ರಸ್ತೆ ಅಭಿವೃದ್ಧಿಗೆ 10 ಕೋಟಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಗೌರಿಬಿದನೂರು: ತಾಲ್ಲೂಕಿನ ತಿಪ್ಪಗಾನಹಳ್ಳಿಯಿಂದ ಆಂಧ್ರಪ್ರದೇಶದ ಹಿಂದೂಪುರ ಗಡಿವರೆಗಿನ ಬಿ.ಎಚ್.ರಸ್ತೆ ಅಭಿವೃದ್ಧಿಗಾಗಿ ಶಾಸಕ ಎನ್.ಎಚ್.ಶಿವಶಂಕರ ರೆಡ್ಡಿ ಈಚೆಗೆ ಗುದ್ದಲಿಪೂಜೆ ನೆರವೇರಿಸಿದರು.ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಗುದ್ದಲಿಪೂಜೆ ನೆರವೇರಿಸಿದ ಅವರು, `10 ಕೋಟಿ ರೂಪಾಯಿ ವೆಚ್ಚದಲ್ಲಿ ರಸ್ತೆ ಕಾಮಗಾರಿ ಕೈಗೊಳ್ಳಲಾಗಿದೆ~ ಎಂದರು.`ತಿಪ್ಪಗಾನಹಳ್ಳಿಯಿಂದ ಕುಡಮಲಕುಂಟೆ ಗಡಿಭಾಗದವರೆಗೂ ರಸ್ತೆಯುದ್ದಕ್ಕೂ ಎರಡೂ ಕಡೆಗಳಲ್ಲಿ  ನಾಲ್ಕು ಅಡಿಗಳಷ್ಟು ರಸ್ತೆ  ವಿಸ್ತರಿಸಿ  ಗುಣಮಟ್ಟದ  ರಸ್ತೆ ನಿರ್ಮಾಣವಾಗುತ್ತದೆ. ಒಂಬತ್ತು ತಿಂಗಳ ಅವಧಿಯಲ್ಲಿ ಕಾಮಗಾರಿ ಪೂರ್ಣಗೊಳಿಸಲು ಪ್ರಯತ್ನಿಸಲಾಗುವುದು. ಈಗಾಗಲೇ  ಶಿರಾದಿಂದ  ಗೌರಿಬಿದನೂರು, ಚಿಕ್ಕಬಳ್ಳಾಪುರ ಮಾರ್ಗವಾಗಿ  ಮುಳಬಾಗಿಲುವರೆಗೂ ರಾಷ್ಟ್ರೀಯ ಹೆದ್ದಾರಿಯ  ಸರ್ವೆ ಕಾರ್ಯ ಮುಗಿದಿದೆ.ಈ ಎರಡೂ ರಾಷ್ಟ್ರೀಯ ಹೆದ್ದಾರಿಗಳು ಗೌರಿಬಿದನೂರು ಮೂಲಕ ಹಾದುಹೋಗುವುದರಿಂದ  ಪ್ರದೇಶ ಅಭಿವೃದ್ಧಿಯಾಗುತ್ತದೆ~ ಎಂದು ಅವರು ತಿಳಿಸಿದರು.`ತಾಲ್ಲೂಕಿನ ವಿವಿಧ ರಸ್ತೆ ಅಭಿವೃದ್ಧಿ ಹಣ ಬಿಡುಗಡೆಯಾಗಿದ್ದು, ಏಪ್ರಿಲ್ ಅಂತ್ಯದೊಳಗೆ ಎಲ್ಲ ರಸ್ತೆ ಕಾಮಗಾರಿಗಳು ಪೂರ್ಣಗೊಳ್ಳಲಿವೆ. ಜಿ.ಬೊಮ್ಮಸಂದ್ರ ಗ್ರಾಮದಿಂದ ಇಂದಿರಾನಗರದವರೆಗೆ 1 ಕೋಟಿ ವೆಚ್ಚದಲ್ಲಿ ಡಾಂಬರೀಕರಣದ ಕಾಮಗಾರಿ ಅತಿ ಶೀಘ್ರದಲ್ಲಿಯೇ ಆರಂಭವಾಗಲಿದೆ.ಡಿ.ಪಾಳ್ಯ ರಸ್ತೆಯಿಂದ ನಾಮಗೋಂಡ್ಲು ಮಾರ್ಗದ ರಸ್ತೆ, ಮೇಳ್ಯದಿಂದ ಚಿಟ್ಟಾವಲಹಳ್ಳಿ ಗ್ರಾಮದವರೆಗೆ, ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿಗಳಿಂದ ಒಟ್ಟು 3 ಕೋಟಿ ವೆಚ್ಚದಲ್ಲಿ   ಕೆಇಬಿಯಿಂದ ಉಡಮಲೋಡು ಮಾರ್ಗವಾಗಿ  ಇಡಗೂರು ರಸ್ತೆವರೆಗಿನ ಅಭಿವೃದ್ಧಿ ಕಾಮಗಾರಿಗೆ ಅನುದಾನ ಬಿಡುಗಡೆಯಾಗಿದೆ~ ಎಂದು ತಿಳಿಸಿದರು.ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಎಂ.ವಿ.ಕೃಷ್ಣಪ್ಪ, ಜಿಲ್ಲಾ ಪಂಚಾಯಿತಿ ಸದಸ್ಯರಾದ  ರಾಘವೇಂದ್ರಹನುಮಾನ್, ಕೇಶವರೆಡ್ಡಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಜಿ.ವೇಣುಗೋಪಾಲರೆಡ್ಡಿ, ಜಿ.ಕೆ.ಸತೀಶ್, ಪ್ರಧಾನ ಕಾರ್ಯದರ್ಶಿ ವೆಂಕಟರಮಣ,  ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಶ್ರೀನಿವಾಸಪ್ಪ, ಉಪಾಧ್ಯಕ್ಷೆ ಚೇತನಾ, ತಾಲ್ಲೂಕು ಪಂಚಾಯಿತಿ  ಮಾಜಿ ಉಪಾಧ್ಯಕ್ಷ ಪ್ರಕಾಶ್‌ರೆಡ್ಡಿ, ಪುರಸಭೆ ಅಧ್ಯಕ್ಷೆ ಪ್ರಮೀಳಾ ಬಾಲಾಜಿ, ಉಪಾಧ್ಯಕ್ಷ ವಿ.ರಮೇಶ್, ಸದಸ್ಯರಾದ ಸತೀಶ್, ಪ್ರಮೀಳಾ ರಾಧಾಕೃಷ್ಣ, ಅನಂತರಾಜ್, ಪದ್ಮಾವತಮ್ಮ,  ಯುವ ಕಾಂಗ್ರೆಸ್ ಅಧ್ಯಕ್ಷ ವೇದಲವೇಣಿ  ವೇಣು, ಕಮಲಾಕರ್ ಮತ್ತಿತರರು ಇದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.