ಗಡ್ಕರಿ ಅಭಿನಂದನೆ

7

ಗಡ್ಕರಿ ಅಭಿನಂದನೆ

Published:
Updated:

 


ನವದೆಹಲಿ (ಪಿಟಿಐ): ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಗೆಲ್ಲಿಸಿದ ಮತದಾರರಿಗೆ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ನಿತಿನ್ ಗಡ್ಕರಿ ಅಭಿನಂದನೆ ಸಲ್ಲಿಸಿದ್ದಾರೆ.

 

`ಅಲ್ಲಿನ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳು ಪಕ್ಷದ ವರ್ಚಸ್ಸನ್ನು ಹೆಚ್ಚಿಸುವ ಜೊತೆಗೆ ಇತರ ರಾಜ್ಯಗಳಿಗೆ ಮಾದರಿಯಾಗಿದೆ ಎಂದು ಶ್ಲಾಘಿಸಿದರು.

 

ಅಮಿತಾಭ್ ಅಭಿನಂದನೆ: (ಚೆನ್ನೈ ವರದಿ:) ಮೂರನೇ ಬಾರಿಗೆ ಗುಜರಾತ್ ಮುಖ್ಯಮಂತ್ರಿಯಾಗುತ್ತಿರುವ ನರೇಂದ್ರ ಮೋದಿಯವರನ್ನು ಬಾಲಿವುಡ್ ಬಿಗ್ `ಬಿ' ಅಮಿತಾಭ್ ಬಚ್ಚನ್ ಅಭಿನಂದಿಸಿದ್ದಾರೆ.

 

ಜಯಾ ಶುಭಾಶಯ: (ಚೆನ್ನೈ ವರದಿ)  ಚುನಾವಣೆಯಲ್ಲಿ ಸತತವಾಗಿ ಮೂರನೇ ಬಾರಿ ಜಯ ಸಾಧಿಸಿರುವ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಅವರನ್ನು ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅಭಿನಂದಿಸಿದ್ದಾರೆ. ಮತ ಎಣಿಕೆ ಪೂರ್ಣಗೊಳ್ಳುತ್ತಿದ್ದಂತೆ ದೂರವಾಣಿ ಮೂಲಕ ಮೋದಿಯವರಿಗೆ ಶುಭಾಶಯ ಕೋರಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry