ಬುಧವಾರ, ಜೂನ್ 16, 2021
22 °C

ಗಣತಿ ಕಾರ್ಯ ಯಶಸ್ವಿಗೊಳಿಸಲು ಮನವಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಡಿಕೇರಿ: ಸಾಮಾಜಿಕ, ಆರ್ಥಿಕ ಮತ್ತು ಜಾತಿಗಣತಿ ಕಾರ್ಯ ಮಾ.15ರೊಳಗೆ ಪೂರ್ಣಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಎನ್.ವಿ. ಪ್ರಸಾದ್ ತಿಳಿಸಿದ್ದಾರೆ.ನಗರದ ಕೋಟೆ ಹಳೇ ವಿಧಾನ ಸಭಾಂಗಣದಲ್ಲಿ ಈಚೆಗೆ ನಡೆದ ಸಾಮಾಜಿಕ, ಆರ್ಥಿಕ ಜಾತಿಗಣತಿ ಕಾರ್ಯದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಎಂ.ಚಂದ್ರೇಗೌಡ ಅವರು ಮಾತನಾಡಿ, ಭಾಗಮಂಡಲ ಹಾಗೂ ಮಡಿಕೇರಿ ನಗರ ಮತ್ತು ಗ್ರಾಮಾಂತರಗಳಲ್ಲಿ ಇನ್ನೂ ಸಾಕಷ್ಟು ಪ್ರಗತಿಯಾಗಬೇಕಿದ್ದು, ಇರುವ ಸೀಮಿತ ಅವಧಿಯಲ್ಲಿ ಹೆಚ್ಚು ಶ್ರಮವಹಿಸಿ ಗಣತಿ ಕಾರ್ಯ ಪೂರ್ಣಗೊಳಿಸಬೇಕು ಎಂದರು.ಜಿ.ಪಂ.ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎನ್. ಕೃಷ್ಣಪ್ಪ ಮಾತನಾಡಿ, ಇಲ್ಲಿನ ಭೌಗೋಳಿಕ ಪರಿಸ್ಥಿತಿ ಹಿನ್ನೆಲೆಯಲ್ಲಿ ಕೊಂಚ ವಿಳಂಬವಾಗುತ್ತಿದೆಯಾದರೂ ಆದಷ್ಟು ಬೇಗ ಕ್ಷೇತ್ರಕಾರ್ಯ ಸ್ಥಗಿತಗೊಳಿಸಿ ಮಾಹಿತಿ ಅಪ್‌ಲೋಡ್ ಮಾಡಬೇಕಿದೆ ಎಂದರು.ಜಿಲ್ಲಾ ಪಂಚಾಯಿಯಿ ಮುಖ್ಯ ಯೋಜನಾಧಿಕಾರಿ ಶ್ರಿನಿವಾಸ್‌ರಾವ್ ಮಾತನಾಡಿ, ಬ್ಲಾಕ್‌ವಾರು ಈವರೆಗೆ ಆಗಿರುವ ಪ್ರಗತಿಯ ಬಗ್ಗೆ ವಿವರಿಸಿ ವಿಳಂಬ ಮಾಡದೆ ನಿಗದಿತ ಅವಧಿಯೊ ಳಗೆ ಗಣತಿ ಮುಗಿಸುವಂತೆ ಕೋರಿದರು.ಗಣತಿ ಬಗ್ಗೆ ಹೆಚ್ಚಿನ ಮಾಹಿತಿ: ಈ ಬಾರಿ ಪ್ರಪ್ರಥಮವಾಗಿ ವಿದ್ಯುನ್ಮಾನ ಯಂತ್ರದ ಮೂಲಕ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಇದಕ್ಕಾಗಿ ಡಾಟಾ ಎಂಟ್ರಿ ಆಪರೇಟರ್‌ಗಳು ಗಣತಿದಾರರೊಂದಿಗೆ ಇರುತ್ತಾರೆ. ಮಾಹಿತಿ ಸಂಗ್ರಹಿಸಿದ ನಂತರ ಮಾಹಿತಿ ನೀಡಿದವರಿಗೆ ಅದನ್ನು ಓದಿ ಹೇಳಿ ಅವರ ಒಪ್ಪಿಗೆ ಪಡೆಯಲಾಗುವುದು. ಒಮ್ಮೆ ಅಳವಡಿಸಿದ ಮಾಹಿತಿಯನ್ನು ಬದಲಾಯಿಸಲು ಅವಕಾಶವಿರುವುದಿಲ್ಲ.ಪ್ರತಿ ಕುಟುಂಬಕ್ಕೆ ಸಂಬಂಧಿಸಿದಂತೆ ಪ್ರತಿ ವ್ಯಕ್ತಿಯ ವೈಯಕ್ತಿಕ ವಿವರಗಳು, ಆರ್ಥಿಕ ಸ್ಥಿತಿಗತಿ, ವಸತಿ/ನಿವಾಸಕ್ಕೆ ಸಂಬಂಧಪಟ್ಟ ಮಾಹಿತಿ ಧರ್ಮ, ಜಾತಿ ಹಾಗೂ ಮೂಲ ಸೌಕರ್ಯಗಳ ಬಗ್ಗೆ ಮಾಹಿತಿಯನ್ನು ಸಂಗ್ರಹಿಸಲಾಗುತ್ತಿದೆ. ವಿವಾಹ ವಿಚ್ಚೇದನ ಪಡೆದವರು, ವಿಧವೆಯರು, ಅವಿವಾಹಿತರು, ಅಂಗವಿಕಲರು, ಮಾನಸಿಕ ಅಸ್ವಸ್ಥರು, ಮಹಿಳೆಯರು ಕೂಡ ಪ್ರತ್ಯೇಕ ಕುಟುಂಬವೆಂದು ಘೋಷಿಸಿಕೊಳ್ಳಬಹುದು.ಗಣತಿ ಸಮಯದಲ್ಲಿ ದಾಖಲಿಸಲಾದ ಮಾಹಿತಿಯ ಬಗ್ಗೆ ಮಾಹಿತಿ ನೀಡಿದವರಿಗೆ ತಿಳಿಸಿ ಅವರಿಂದ ಸಹಿಯನ್ನು ಪಡೆದು ಸ್ವೀಕೃತಿ ಪ್ರತಿಯನ್ನು ನೀಡಲಾಗುತ್ತದೆ.ಸಾಮಾಜಿಕ, ಆರ್ಥಿಕ ಸ್ಥಿತಿಗತಿಗಳ ಮಾಹಿತಿಯನ್ನು ಸಾರ್ವಜನಿಕವಾಗಿ (ಧರ್ಮ, ಜಾತಿ, ಪಂಗಡ ಮಾಹಿತಿಯನ್ನು ಹೊರತು ಪಡಿಸಿ) ಬಹಿರಂಗಪಡಿಸುವುದರ ಬಗ್ಗೆ ಮಾಹಿತಿದಾರರ ಒಪ್ಪಿಗೆಯನ್ನು ಕೇಳಲಾಗುವುದು.          ಒಪ್ಪಿದಲ್ಲಿ ಈ ಮಾಹಿತಿಯನ್ನು ಸಾರ್ವಜನಿಕವಾಗಿ ಪ್ರಕಟಿಸಲಾಗುತ್ತದೆ.

ಒಪ್ಪಿಗೆ ಕೊಡದೇ ಇದ್ದಲ್ಲಿ ಸರ್ಕಾರ ಕಲ್ಯಾಣ ಯೋಜನೆಗಳ ಅಡಿಯಲ್ಲಿ ಯಾವುದೇ ಪ್ರಯೋಜನ ಪಡೆಯಲು ಪರಿಗಣಿಸಲಾಗುವುದಿಲ್ಲ.ಇದರಲ್ಲಿ ವ್ಯತ್ಯಾಸಗಳಿದ್ದಲ್ಲಿ ಕರಡು ಪಟ್ಟಿ ಪ್ರಕಟಣೆಯಾದ 21 ದಿನದೊಳಗೆ ಕ್ಲೈಮ್‌ಗಳನ್ನು ಸರ್ಕಾರದಿಂದ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ನೇಮಿಸಲ್ಪಟ್ಟ ಅಧಿಕಾರಿಗಳಿಗೆ ಸಲ್ಲಿಸಬೇಕು. ನಂತರ ಗ್ರಾಮ ಸಭೆಯಲ್ಲಿ ಮಂಡಿಸಿ ಸಭೆಯಲ್ಲಿ ವ್ಯಕ್ತವಾಗುವ ಎಲ್ಲ ಅಭಿಪ್ರಾಯಗಳನ್ನು ದಾಖಲಿಸಿ ಪ್ರತ್ಯೇಕವಾಗಿ ಕ್ಲೈಮ್‌ಗಳನ್ನು ಪರಿಶೀಲಿಸಲಾಗುತ್ತದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.