ಶುಕ್ರವಾರ, ಜೂನ್ 5, 2020
27 °C

ಗಣರಾಜ್ಯೋತ್ಸವ ಫಲಪುಷ್ಪ ಪ್ರದರ್ಶನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ತೋಟಗಾರಿಕೆ ಇಲಾಖೆ ಹಾಗೂ ಮೈಸೂರು ಉದ್ಯಾನಕಲಾ ಸಂಘ ನಗರದ ಲಾಲ್‌ಬಾಗ್‌ನಲ್ಲಿ ಬುಧವಾರದಿಂದ ಇದೇ 26ರವರೆಗೆ ಗಣರಾಜ್ಯೋತ್ಸವ ಫಲಪುಷ್ಪ ಪ್ರದರ್ಶನ ಏರ್ಪಡಿಸಿದೆ.ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬುಧವಾರ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ತೋಟಗಾರಿಕಾ ಸಚಿವ ಎಸ್.ಎ.ರವೀಂದ್ರನಾಥ್, ಗೃಹ ಸಚಿವ ಆರ್.ಅಶೋಕ, ಮೇಯರ್ ಎಸ್.ಕೆ.ನಟರಾಜ್, ಸಂಸದ ಅನಂತಕುಮಾರ್ ಮತ್ತಿತರರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.ಮುನ್ನೆಚ್ಚರಿಕೆ ಕ್ರಮವಾಗಿ ಲಾಲ್‌ಬಾಗ್‌ನ ಆಯಾಕಟ್ಟಿನ ಸ್ಥಳಗಳಲ್ಲಿ ಸಿಸಿಟಿವಿಗಳನ್ನು ಅಳವಡಿಸಲಾಗಿದೆ. ಪುಷ್ಪಕಲಾ ಸ್ಪರ್ಧೆಗಳ ಪ್ರದರ್ಶನ 20ರಿಂದ ಆರಂಭವಾಗಲಿದೆ.ವಾರದ ದಿನಗಳಲ್ಲಿ ವಯಸ್ಕರಿಗೆ ರೂ. 30 ಪ್ರವೇಶ ಶುಲ್ಕ ನಿಗದಿ ಪಡಿಸಲಾಗಿದ್ದು ರಜಾದಿನ 23 ಹಾಗೂ 26ರಂದು ರೂ. 40,  ಮಕ್ಕಳಿಗೆ ರೂ.10, ಕಾರು ಮತ್ತು ಒಬ್ಬರಿಗೆ ರೂ 40 ವಿಶೇಷ ದಿನಗಳಲ್ಲಿ 50, ಕಾರು ಮತ್ತು ಎಂಟು ಜನರಿಗೆ ರೂ. 250, ವಿಶೇಷ ದಿನಗಳಲ್ಲಿ ರೂ.330 ನಿಗದಿಪಡಿಸಲಾಗಿದೆ ಎಂದು ತೋಟಗಾರಿಕಾ ಇಲಾಖೆ ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.