ಬೆಂಗಳೂರು: ಗಣಿಗಳ ವಿಂಗಡಣೆಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ನ ಕೇಂದ್ರ ಉನ್ನತಾಧಿಕಾರ ಸಮಿತಿಯ (ಸಿಇಸಿ) ವರದಿ ಪ್ರಶ್ನಿಸಿ ತಾವು ಸಲ್ಲಿಸಿರುವ ಮಧ್ಯಂತರ ಅರ್ಜಿ ಇತ್ಯರ್ಥಕ್ಕೂ ಮುನ್ನವೇ ರಾಜ್ಯ ಸರ್ಕಾರ ತರಾತುರಿಯಲ್ಲಿ ಗಣಿಗಾರಿಕೆಗೆ ಅವಕಾಶ ನೀಡಬಾರದು ಎಂದು ಧಾರವಾಡದ ಸಮಾಜ ಪರಿವರ್ತನಾ ಸಮುದಾಯದ ಹಿರಿಯ ಸಲಹೆಗಾರ ಎಸ್.ಆರ್.ಹಿರೇಮಠ ಒತ್ತಾಯಿಸಿದರು.

ಸುಪ್ರೀಂಕೋರ್ಟ್ನ ಕೇಂದ್ರ ಉನ್ನತಾಧಿಕಾರ ಸಮಿತಿ (ಸಿಇಸಿ) ವರದಿ ಆಧರಿಸಿ ಎಂಟು ಕಂಪೆನಿಗಳಿಗೆ ಗಣಿಗಾರಿಕೆ ಪುನರಾರಂಭಿಸಲು ಅನುಮತಿ ನೀಡುತ್ತಿರುವುದಾಗಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ನಿರ್ದೇಶಕರು ನೀಡಿರುವ ಹೇಳಿಕೆಗೆ ಅವರು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಪ್ರತಿಕ್ರಿಯಿಸಿದರು. ಇನ್ನೂ ಇತ್ಯರ್ಥಕ್ಕೆ ಬಾಕಿ ಇರುವ ಕಾನೂನು ತೊಡಕುಗಳನ್ನು ಅರಿಯದೇ ಗಣಿ ಇಲಾಖೆ ನಿರ್ದೇಶಕರು ಹೇಳಿಕೆ ನೀಡಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

`ಆಯಾ ಗಣಿಗಳಲ್ಲಿ ನಡೆದಿರುವ ಅಕ್ರಮಗಳ ಪ್ರಮಾಣವನ್ನು ಆಧರಿಸಿ ಸಿಇಸಿ ವರ್ಗೀಕರಣ ಮಾಡಿದೆ. ಅಕ್ರಮದಲ್ಲಿ ಭಾಗಿಯಾದ ಯಾವುದೇ ಕಂಪೆನಿ ಅಥವಾ ಗುತ್ತಿಗೆದಾರನಿಗೂ ಮತ್ತೆ ಗಣಿಗಾರಿಕೆಗೆ ಅವಕಾಶ ದೊರೆಯಬಾರದು ಎಂಬುದು ನಮ್ಮ ಬೇಡಿಕೆ. ಅದು ಇನ್ನೂ ಇತ್ಯರ್ಥ ಆಗಿಲ್ಲ. ಇಂತಹ ಸಂದರ್ಭದಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ನಿರ್ದೇಶಕ ಎಚ್.ಆರ್.ಶ್ರೀನಿವಾಸ್ ಅವರು ವಾಸ್ತವಕ್ಕೆ ದೂರವಾದ ಹೇಳಿಕೆಗಳನ್ನು ನೀಡಬಾರದು~ ಎಂದರು.

ಬಳ್ಳಾರಿಯ ಜಂಬುನಾಥೇಶ್ವರ ದೇವಾಲಯದ ಎರಡು ಕಿ.ಮೀ. ವ್ಯಾಪ್ತಿಯಲ್ಲಿ ಗಣಿಗಾರಿಕೆ ನಡೆಸುವುದಕ್ಕೆ ಸುಪ್ರೀಂಕೋರ್ಟ್ 2011ರ ಮಾರ್ಚ್ 8ರಂದು ತಡೆ ನೀಡಿದೆ. ಈಗ ಅದೇ ಪ್ರದೇಶದಲ್ಲಿ ಎಂಟು ಕಂಪೆನಿಗಳಿಗೆ ಗಣಿಗಾರಿಕೆಗೆ ಅನುಮತಿ ನೀಡುತ್ತಿರುವುದಾಗಿ ಈ ಅಧಿಕಾರಿ ಹೇಳಿಕೆ ನೀಡಿದ್ದಾರೆ.

ಈ ಎಂಟು ಕಂಪೆನಿಗಳಲ್ಲಿ ಸೇರಿರುವ ಆರ್ಬಿಎಸ್ಎಸ್ಎನ್ ಕುರಿತೂ ಆಕ್ಷೇಪಗಳಿವೆ. ಈ ಕಂಪೆನಿ ತನ್ನ ಗಡಿಗೆ ಹೊಂದಿಕೊಂಡಿರುವ ಅರಣ್ಯ ಪ್ರದೇಶವನ್ನು ಅತಿಕ್ರಮಿಸಿ ರೂ 300 ಕೋಟಿ ಮೌಲ್ಯದ ಅದಿರನ್ನು ಅಕ್ರಮವಾಗಿ ತೆಗೆದಿದೆ ಎಂದು ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಫೆಬ್ರುವರಿ 16ರಂದು ನೋಟಿಸ್ ನೀಡಿರುವುದನ್ನೂ ಗಣನೆಗೆ ತೆಗೆದುಕೊಂಡಿಲ್ಲ ಎಂದರು.

ಬಂಧನಕ್ಕೆ ಆಗ್ರಹ: `ಅಕ್ರಮ ಗಣಿಗಾರಿಕೆಗೆ ಕುಮ್ಮಕ್ಕು ನೀಡಿರುವ ಹಲವು ಅಧಿಕಾರಿಗಳ ವಿರುದ್ಧ ಇನ್ನೂ ಯಾವುದೇ ಕ್ರಮ ಜರುಗಿಸಿಲ್ಲ. ಬಳ್ಳಾರಿ ಎಸ್ಪಿ ಹುದ್ದೆಯಲ್ಲಿದ್ದ ಸೀಮಂತ್ಕುಮಾರ್ ಸಿಂಗ್, ಜಿಲ್ಲಾಧಿಕಾರಿಯಾಗಿದ್ದ ಬಿ.ಶಿವಪ್ಪ, ಅರಣ್ಯ ಸಂರಕ್ಷಣಾಧಿಕಾರಿ ಹುದ್ದೆಯಲ್ಲಿದ್ದ ಮನೋಜ್ ಶುಕ್ಲಾ, ಗಣಿ ಮತ್ತು ಭೂ ವಿಜ್ಞಾನ ಇಲಾಖೆ ನಿರ್ದೇಶಕರಾಗಿದ್ದ ಎಂ.ಇ.ಶಿವಲಿಂಗಮೂರ್ತಿಅವರನ್ನು ಸಿಬಿಐ ತಕ್ಷಣ ಬಂಧಿಸಬೇಕು~ ಎಂದು ಆಗ್ರಹಿಸಿದರು.

`ಅಕ್ರಮ ಗಣಿಗಾರಿಕೆ ನಡೆಸಿದ ಆರೋಪದ ಮೇಲೆ ಬಂಧನದಲ್ಲಿರುವ ಮಾಜಿ ಸಚಿವ ಜಿ.ಜನಾರ್ದನ ರೆಡ್ಡಿ ಅವರಿಗೆ ಜಾಮೀನು ಕೊಡಿಸಲು ನ್ಯಾಯಾಧೀಶರಿಗೆ ಲಂಚ ನೀಡಿದ ಪ್ರಕರಣದಲ್ಲಿ ಶಾಸಕರಾದ ಜಿ.ಸೋಮಶೇಖರ ರೆಡ್ಡಿ ಮತ್ತು ಟಿ.ಎಚ್.ಸುರೇಶ್ಬಾಬು ಪ್ರಮುಖ ಆರೋಪಿಗಳು. ಅವರನ್ನು ಬಂಧಿಸಲು ಆಂಧ್ರಪ್ರದೇಶದ ಭ್ರಷ್ಟಾಚಾರ ನಿಗ್ರಹ ದಳ ಅಗತ್ಯ ಕ್ರಮ ಕೈಗೊಳ್ಳಬೇಕು~ ಎಂದು ಆಗ್ರಹಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.