ಭಾನುವಾರ, ಏಪ್ರಿಲ್ 11, 2021
32 °C

ಗಣಿ ಗುತ್ತಿಗೆ ನವೀಕರಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಪಣಜಿ (ಪಿಟಿಐ): ಗಣಿ ಗುತ್ತಿಗೆ ನವೀಕರಣ ಮಾಡಿಸಿಕೊಳ್ಳುವ ಮಾಲೀಕರು ಸರ್ಕಾರಕ್ಕೆ 20 ವರ್ಷಗಳ ಒಟ್ಟು ರಾಯಧನದಲ್ಲಿ ಶೇ 15ರಷ್ಟು ಪಾವತಿಗೆ ಮುದ್ರಾಂಕ ಶುಲ್ಕ ಕಾಯ್ದೆ ತಿದ್ದುಪಡಿಗೆ ಗೋವಾ ಸರ್ಕಾರ ಒಪ್ಪಿಗೆ ಸೂಚಿಸಿದೆ.ಕಾಯ್ದೆಗೆ ತಿದ್ದುಪಡಿ ಮಾಡುವುದರಿಂದ ಪ್ರಸಕ್ತ ಹಣಕಾಸಿನ ವರ್ಷದಲ್ಲಿ 2,500 ಕೋಟಿ ರೂಪಾಯಿ ಆದಾಯ ಸಂಗ್ರಹವಾಗುವ ಸಾಧ್ಯತೆ ಇದೆ.ಇತ್ತೀಚೆಗೆ ನಡೆದ ಸಚಿವ ಸಂಪುಟದ ಸಭೆಯಲ್ಲಿ ಕಾಯ್ದೆ ತಿದ್ದುಪಡಿಗೆ ಒಪ್ಪಿಗೆ ನೀಡಲಾಗಿದ್ದು, ಸದ್ಯ ನಡೆಯುತ್ತಿರುವ ವಿಧಾನಸಭೆಯ ಅಧಿವೇಶನದಲ್ಲಿ ವಿಷಯ ಮಂಡಿಸುವ ಸಾಧ್ಯತೆ ಇದೆ.

ಈ ಹಿಂದೆ ಸರ್ಕಾರ ಗಣಿ ಗುತ್ತಿಗೆಗಳನ್ನು ನವೀಕರಣ ಮಾಡಿರಲಿಲ್ಲ. ಅಲ್ಲದೇ ಇದಕ್ಕೆ ಸಂಬಂಧಿಸಿದ ಕಾಯ್ದೆ ಕೂಡ ಅಷ್ಟು ಕಠಿಣವಾಗಿರಲಿಲ್ಲ.ವಿವಿಧ ಪ್ರಾಧಿಕಾರಗಳಿಂದ ಒಪ್ಪಿಗೆ ಪಡೆದಿರುವ ಗಣಿ ಕಂಪೆನಿಗಳ ಗುತ್ತಿಗೆ ನವೀಕರಣಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಮನೋಹರ್ ಪಾರಿಕ್ಕರ್ ತಿಳಿಸಿದ್ದಾರೆ.ಕಳೆದ ಹಣಕಾಸಿನ ವರ್ಷದಲ್ಲಿ ಗೋವಾ 43 ದಶ ಲಕ್ಷ ಟನ್ ಕಬ್ಬಿಣದ ಅದಿರನ್ನು ರಫ್ತು ಮಾಡಿತ್ತು. ಇದರಿಂದಾಗಿ 900 ಕೋಟಿ ರೂಪಾಯಿ ರಾಯಧನ ಸಂಗ್ರಹವಾಗಿತ್ತು.ಸರ್ಕಾರಿ ಹುದ್ದೆ: ಧಾರ್ಮಿಕ ಸ್ಥಳದಲ್ಲಿ ಪ್ರಚಾರ

ಸರ್ಕಾರಿ ಹುದ್ದೆಗಳ ಭರ್ತಿಗೆ ಸಂಬಂಧಿಸಿದ ಜಾಹೀರಾತನ್ನು ಚರ್ಚ್‌ಗಳು, ದೇವಸ್ಥಾನಗಳು ಮತ್ತು ಸ್ವಯಂ ಸೇವಾ ಸಂಸ್ಥೆಗಳ ಮೂಲಕ ಪ್ರಚಾರಪಡಿಸಲಾಗುವುದು. ಇದರಿಂದ ಭವಿಷ್ಯದಲ್ಲಿ ಸರ್ಕಾರಿ ಹುದ್ದೆಗಳನ್ನು ನ್ಯಾಯಯುತವಾಗಿ ಭರ್ತಿ ಮಾಡಬಹುದು ಎಂದು  ಹೇಳಿದ್ದಾರೆ.`ಸರ್ಕಾರಿ ಹುದ್ದೆಗಳಿಗೆ ಜನರು ಅರ್ಜಿ ಸಲ್ಲಿಸಬೇಕು ಎನ್ನುವುದು ನನ್ನ ಬಯಕೆ. ಹೀಗಾಗಿ ಧಾರ್ಮಿಕ ಸ್ಥಳಗಳು ಮತ್ತು ಸ್ವಯಂ ಸೇವಾ ಸಂಸ್ಥೆಗಳಿಗೆ ಜಾಹೀರಾತು ಕಳುಹಿಸಲಾಗುವುದು~ ಎಂದು ಅವರು ತಿಳಿಸಿದ್ದಾರೆ.

ಆರು ವರ್ಷದಲ್ಲಿ 329 ವಿದೇಶಿಯರ ಸಾವುಪ್ರವಾಸಿಗರ ನೆಚ್ಚಿನ ತಾಣವಾಗಿರುವ ಗೋವಾದಲ್ಲಿ 2005-11ರ ಅವಧಿಯಲ್ಲಿ 329 ವಿದೇಶಿಯರು ಮೃತಪಟ್ಟಿದ್ದಾರೆ ಎಂದು ಪ್ರವಾಸೋದ್ಯಮ ಸಚಿವ ದಿಲೀಪ್ ಪರುಳೇಕರ್ ಗುರುವಾರ ವಿಧಾನಸಭೆಗೆ ತಿಳಿಸಿದರು. ಇವರಲ್ಲಿ 177 ಮಂದಿ ಅಸ್ವಾಭಾವಿಕವಾಗಿ ಸಾವಿಗೀಡಾಗಿದ್ದಾರೆ. ಮೃತರಲ್ಲಿ ಹೆಚ್ಚಿನವರು ರಷ್ಯಾದವರು. ಬ್ರಿಟನ್‌ನ ಪ್ರಜೆಗಳೂ ಇಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಾವಿಗೀಡಾಗಿದ್ದಾರೆ. 2009ರಲ್ಲಿ ಅತಿ ಹೆಚ್ಚು (65 ಜನ) ಮೃತಪಟ್ಟಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.