ಶುಕ್ರವಾರ, ಮೇ 7, 2021
23 °C

ಗಣೇಶ ವಿಸರ್ಜನೆ ವೇಳೆ ಗುಂಪು ಘರ್ಷಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಡ್ಯ: ಗಣೇಶಮೂರ್ತಿಯನ್ನು ಬುಧವಾರ ರಾತ್ರಿ ವಿಸರ್ಜಿಸಲು ತೆರಳುತ್ತಿದ್ದ ವೇಳೆ ಕಿಡಿಗೇಡಿಗಳ ಗುಂಪೊಂದು ಹಲ್ಲೆ ನಡೆಸಿದ್ದು, ಅವರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿ ಮತ್ತೊಂದು ಗುಂಪಿನ ಜನರು ನಗರದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು.ನಗರದ ಪೊಲೀಸ್ ವರಿಷ್ಠಾಧಿಕಾ ರಿಗಳ ಕಚೇರಿ ಎದುರು ಜಮಾವಣೆ ಗೊಂಡ ನೂರಾರು ಯುವಕರು, ಘಟನೆಗೆ ಕಾರಣರಾದ ಆರೋಪಿಗಳನ್ನು ತಕ್ಷಣ ಬಂಧಿಸಿ ಕಾನೂನು ರೀತಿ ಕ್ರಮ ಜರುಗಿಸಲು ಆಗ್ರಹಪಡಿಸಿದರು.ಗಣೇಶ ಮೂರ್ತಿ ಮೆರವಣಿಗೆ ಕಾಲೋನಿಯ ಒಂಬತ್ತನೇ ಕ್ರಾಸ್‌ನ ಪ್ರಾರ್ಥನಾ ಮಂದಿರವೊಂದರ ಮುಂದೆ ರಾತ್ರಿ 10.30ರ ಸಮಯದಲ್ಲಿ ಹೋಗು ತ್ತಿದ್ದಾಗ ಗುಂಪೊಂದು ಮುಂದೆ ಹೋಗದಂತೆ ತಡೆದು ಹಲ್ಲೆ ನಡೆಸಿದೆ ಎಂದು ಪ್ರತಿಭಟನಾಕಾರರು ಆರೋಪಿ ಸಿದರು. ಈ ಸಂಬಂಧ ಜಿಲ್ಲಾಧಿಕಾರಿಗಳು ಒಂದು ಗುಂಪಿನ ಯುವಕರ ಸಭೆ ನಡೆಸಿದ್ದು, ಶಾಂತಿ ಕಾಪಾಡಿಕೊಳ್ಳುವಂತೆ ತಿಳಿಸಿದರು. ತಪ್ಪಿತಸ್ಥರನ್ನು ಬಂಧಿಸುವ ಭರವಸೆ ನೀಡಿದ ನಂತರ ಪ್ರತಿಭಟನೆ ಯನ್ನು ವಾಪಸ್ಸು ಪಡೆಯಲಾಯಿತು.ರಾತ್ರಿ ಘಟನೆ ನಡೆದ ನಂತರ ಸ್ಥಳದಲ್ಲಿ ಮುಂಜಾಗ್ರತಾ ಕ್ರಮವಾಗಿ ಪೊಲೀಸ ರನ್ನು ನಿಯೋಜಿಸಿದ್ದು, ಪೊಲೀಸ್ ವರಿಷ್ಠಾಧಿಕಾರಿ ಕೌಶಲೇಂದ್ರ ಕುಮಾರ್, ಎಎಸ್‌ಪಿ ರಾಜಣ್ಣ ಭೇಟಿ ನೀಡಿದ್ದರು.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.