ಗಣೇಶ ಹಬ್ಬಕ್ಕೆ ಬಂದೋಬಸ್ತ್

7

ಗಣೇಶ ಹಬ್ಬಕ್ಕೆ ಬಂದೋಬಸ್ತ್

Published:
Updated:

ಬೆಂಗಳೂರು: ಗಣೇಶ ಹಬ್ಬದ ಅಂಗವಾಗಿ ನಗರದೆಲ್ಲೆಡೆ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ ಎಂದು ನಗರ ಪೊಲೀಸ್ ಕಮಿಷನರ್ ರಾಘವೇಂದ್ರ ಔರಾದಕರ್ ತಿಳಿಸಿದ್ದಾರೆ.ನಗರದ ಒಂಬತ್ತು ಸಾವಿರ ಪೊಲೀಸ್ ಸಿಬ್ಬಂದಿ, ರಾಜ್ಯ ಮೀಸಲು ಪೊಲೀಸ್ ಪಡೆಯ (ಕೆಎಸ್‌ಆರ್‌ಪಿ) 30 ತುಕಡಿ, ನಗರ ಸಶಸ್ತ್ರ ಮೀಸಲು ಪೊಲೀಸ್ ಪಡೆಯ (ಸಿಎಆರ್) 32 ತುಕಡಿ ಮತ್ತು ಗೃಹರಕ್ಷಕ ದಳದ ಒಂದು ಸಾವಿರ ಸಿಬ್ಬಂದಿಯನ್ನು ಭದ್ರತೆಗೆ ನಿಯೋಜಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಗಣೇಶ ಮೂರ್ತಿಗಳನ್ನು ವಿಸರ್ಜನೆ ಮಾಡುವ ಸ್ಯಾಂಕಿ ಕೆರೆ, ಹಲಸೂರು ಕೆರೆ, ಯಡಿಯೂರು ಕೆರೆ, ಹೆಬ್ಬಾಳ ಕೆರೆ ಹಾಗೂ ಇತರೆ ಕೆರೆಗಳ ಬಳಿ ಸಮರ್ಪಕ ಬೆಳಕಿನ ವ್ಯವಸ್ಥೆ ಮಾಡಲಾಗಿದೆ.ಟ್ಯಾನರಿ ರಸ್ತೆ, ಶಿವಾಜಿನಗರ, ಜಯನಗರ, ಚಾಮರಾಜಪೇಟೆ, ಜಗಜೀವನರಾಂನಗರ, ಯಾರಬ್ ನಗರ, ಜೆ.ಸಿ.ನಗರ, ಚಿಕ್ಕ ಬೆಟ್ಟಹಳ್ಳಿ ಮತ್ತಿತರ ಸೂಕ್ಷ್ಮ ಪ್ರದೇಶಗಳಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಸಿ.ಸಿ ಟಿ.ವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಅಲ್ಲದೇ ಆಯಕಟ್ಟಿನ ಜಾಗಗಳಲ್ಲಿ ಹೆಚ್ಚಿನ ಸಿಬ್ಬಂದಿಯನ್ನು ಭದ್ರತೆಗೆ ನಿಯೋಜಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry