ಗಮನ ಬೇರೆಡೆ ಸೆಳೆದು ರೂ 1.5 ಲಕ್ಷ ಆಭರಣ ದರೋಡೆ

ಬುಧವಾರ, ಮೇ 22, 2019
33 °C

ಗಮನ ಬೇರೆಡೆ ಸೆಳೆದು ರೂ 1.5 ಲಕ್ಷ ಆಭರಣ ದರೋಡೆ

Published:
Updated:

ಬೆಂಗಳೂರು: ಪೊಲೀಸ್ ಸಿಬ್ಬಂದಿ ಸೋಗಿನಲ್ಲಿ ದುಷ್ಕರ್ಮಿಗಳು ಮಹಿಳೆಯ ಗಮನ ಬೇರೆಡೆ ಸೆಳೆದು ಸುಮಾರು 1.50 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ದೋಚಿ ಪರಾರಿಯಾದ ಘಟನೆ ಕೊಟ್ಟಿಗೆಪಾಳ್ಯ ಬಸ್ ನಿಲ್ದಾಣದ ಬಳಿ ಮಂಗಳವಾರ ಸಂಜೆ ನಡೆದಿದೆ.ಈ ಸಂಬಂಧ ಕೊಟ್ಟಿಗೆಪಾಳ್ಯ ನಿವಾಸಿ ಪುಟ್ಟತಾಯಮ್ಮ ಎಂಬುವರು ದೂರು ಕೊಟ್ಟಿದ್ದಾರೆ. ಬಿಎಸ್‌ಎನ್‌ಎಲ್ ಕಚೇರಿಯ ಬಸವೇಶ್ವರನಗರ ಶಾಖೆಯಲ್ಲಿ ಉದ್ಯೋಗಿಯಾಗಿರುವ ಅವರು ಕೆಲಸ ಮುಗಿಸಿಕೊಂಡು ಮನೆಗೆ ಬರುತ್ತಿದ್ದಾಗ ಕಿಡಿಗೇಡಿಗಳು ಈ ಕೃತ್ಯ ಎಸಗಿ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.ಬಿಎಂಟಿಸಿ ಬಸ್‌ನಲ್ಲಿ ಬಂದ ಪುಟ್ಟತಾಯಮ್ಮ ಅವರು ಕೊಟ್ಟಿಗೆಪಾಳ್ಯ ನಿಲ್ದಾಣದಲ್ಲಿ ಇಳಿದು ಮನೆಗೆ ನಡೆದು ಹೋಗುತ್ತಿದ್ದರು. ಅಲ್ಲಿಗೆ ಬೈಕ್‌ನಲ್ಲಿ ಬಂದ ಇಬ್ಬರು ಅಪರಿಚಿತರು, `ಮುಂದೆ ಮಹಿಳೆಯ ಕೊಲೆಯಾಗಿದೆ. ಆಭರಣಗಳನ್ನು ಬಿಚ್ಚಿ ಬ್ಯಾಗ್‌ನಲ್ಲಿ ಇಟ್ಟುಕೊಳ್ಳಿ~ ಎಂದು ಹೇಳಿದರು.ಇದನ್ನು ನಂಬಿದ ಅವರು ಎರಡು ಸರಗಳನ್ನು ಬಿಚ್ಚಿ ಬ್ಯಾಗ್‌ನಲ್ಲಿ ಇಟ್ಟುಕೊಳ್ಳಲು ಮುಂದಾದರು. ಅವರಿಗೆ ನೆರವು ನೀಡುವ ನೆಪದಲ್ಲಿ ಸರಗಳನ್ನು ಪಡೆದ ದುಷ್ಕರ್ಮಿಗಳು ಅವುಗಳನ್ನು ಪ್ಲಾಸ್ಟಿಕ್ ಕವರ್‌ನಲ್ಲಿ ಹಾಕಿದಂತೆ ಮಾಡಿ, ಆ ಕವರ್ ಅನ್ನು ಪುಟ್ಟತಾಯಮ್ಮನಿಗೆ ಕೊಟ್ಟು ಪರಾರಿಯಾಗಿದ್ದಾರೆ. ಅವರು ಮನೆಗೆ ಹೋಗಿ ಕವರ್ ತೆರೆದು ನೋಡಿದಾಗ ಸರಗಳು ಇಲ್ಲದಿರುವುದು ಗೊತ್ತಾಗಿದೆ.

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry