ಸಕಲೇಶಪುರ: ‘ಅಂಗವಿಕಲ ಮಕ್ಕಳ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹ ನೀಡುವುದು ಮುಖ್ಯವೇ ಹೊರತು; ಅವರ ಬಗ್ಗೆ ಅನುಕಂಪ ತೋರುವುದು ಬೇಡ’ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಎಸ್. ಪ್ರಕಾಶ್ ಹೇಳಿದರು.

ಇಲ್ಲಿಯ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಅಂಗವಿಕಲರ ದಿನಾಚರಣೆ ಅಂಗವಾಗಿ ಸಾರ್ವಜನಿಕ ಶಿಕ್ಷಣ ಇಲಾಖೆ ಮಂಗಳವಾರ ಅಂಗವಿಕಲ ಮಕ್ಕಳು ಹಾಗೂ ಅವರ ಪೊಷಕರಿಗಾಗಿ ಏರ್ಪಡಿಸಿದ್ದ ವಿವಿಧ ಆಟೋಟ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಮಾತನಾಡಿದರು.

ಕ್ಷೇತ್ರ ಸಮನ್ವಯ ಅಧಿಕಾರಿ ಅನಿತಾ, ಕ್ಷೇತ್ರ ಸಂಪನ್ಮೂಲ ವ್ಯಕ್ತಿ, ಎಚ್.ಕೆ. ಚಂದ್ರಶೇಖರ್, ಶಿಕ್ಷಣ ಸಂಯೋಜಕಿ ಗೌತಮಿ, ಕೆ.ಆರ್. ವೆಂಕಟೇಶ್ ಇದ್ದರು.

ಇಂದಿನಿಂದ ಪ್ರತಿಭಾ ಕಾರಂಜಿ ಸ್ಪರ್ಧೆ
ಸಕಲೇಶಪುರ: ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಪಟ್ಟಣದಲ್ಲಿ ಡಿ. 4 ಹಾಗೂ 5ರಂದು ತಾಲ್ಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ ನಡೆಯಲಿದೆ. ಪಯೋನಿಯರ್ ಪಬ್ಲಿಕ್ ಶಾಲೆಯಲ್ಲಿ ಪ್ರಾಥಮಿಕ ಶಾಲಾ ವಿಭಾಗದ ಪ್ರತಿಭಾ ಕಾರಂಜಿ ಸ್ಪರ್ಧೆ ಡಿ. 4ರಂದು ಬೆಳಿಗ್ಗೆ 9.30ರಿಂದ ಆರಂಭಗೊಳ್ಳುತ್ತದೆ.

ಡಿ.5ರಂದು ಸರ್ಕಾರಿ ಪದವಿಪೂರ್ವ ಕಾಲೇಜು ಆವರಣದಲ್ಲಿ ಪ್ರೌಢಶಾಲಾ ವಿಭಾಗದ ಪ್ರತಿಭಾ ಕಾರಂಜಿ ಬೆಳಿಗ್ಗೆ 9.30ರಿಂದ ಆರಂಭಗೊಳ್ಳುತ್ತದೆ ಎಂದು ಕ್ಷೇತ್ರ ಶಿಕ್ಷಣ ಅಧಿಕಾರಿ ಕೆ.ಎಸ್. ಪ್ರಕಾಶ್ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.