ಬೆಂಗಳೂರು: ಬಿಜೆಪಿ ಮುಖಂಡ ಬಿ.ಎಸ್.ಯಡಿಯೂರಪ್ಪ ವಿರುದ್ಧ ದಾಖಲಾಗಿದ್ದ ಎಫ್ಐಆರ್ ಅನ್ನು ಹೈಕೋರ್ಟ್ ವಿಭಾಗೀಯ ಪೀಠ ರದ್ದುಪಡಿಸಿದ ತಕ್ಷಣವೇ ಅವರ ಪಾಳಯದಲ್ಲಿ ಚಟುವಟಿಕೆಗಳು ಗರಿಗೆದರಿವೆ. 24 ಗಂಟೆಯೊಳಗೆ ಮತ್ತೆ ತಮ್ಮನ್ನು ಮುಖ್ಯಮಂತ್ರಿ ಮಾಡಬೇಕೆನ್ನುವ ಸ್ಪಷ್ಟ ಸಂದೇಶವನ್ನು ಯಡಿಯೂರಪ್ಪ ಅವರು ಪಕ್ಷದ ಹೈಕಮಾಂಡ್ಗೆ ರವಾನಿಸಿದ್ದಾರೆ.

ಅಕ್ರಮ ಗಣಿಗಾರಿಕೆ ಕುರಿತ ಲೋಕಾಯುಕ್ತ ವರದಿಯಲ್ಲಿ, ಯಡಿಯೂರಪ್ಪ ಅವರ ಹೆಸರು ಇದೆ ಎಂಬ ಕಾರಣಕ್ಕೆ ಅವರಿಂದ ಪಕ್ಷದ ಹೈಕಮಾಂಡ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡಿಸಿತ್ತು. ಅದರ ಬೆನ್ನಲ್ಲೇ ರಾಜ್ಯಪಾಲರು ಯುಡಿಯೂರಪ್ಪ ವಿರುದ್ಧ ಎಫ್ಐಆರ್ ದಾಖಲಿಸಲು ಅನುಮತಿ ನೀಡಿದ್ದರು.

`ಈಗ ಅದೇ ಪ್ರಕರಣದಲ್ಲಿ ಜಯ ಸಿಕ್ಕಿದೆ. ಮತ್ತೆ ಮುಖ್ಯಮಂತ್ರಿ ಮಾಡಿ~ ಎಂದು ಯಡಿಯೂರಪ್ಪ ಪಟ್ಟುಹಿಡಿದಿದ್ದಾರೆ.

ಹೈಕೋರ್ಟ್ ತೀರ್ಪು ಹೊರಬಿದ್ದ ತಕ್ಷಣವೇ ಯಡಿಯೂರಪ್ಪ ಅವರ ರೇಸ್ಕೋರ್ಸ್ ರಸ್ತೆಯ ಮನೆಯಲ್ಲಿ ಅವರ ಆಪ್ತ ಸಚಿವರು ಮತ್ತು ಶಾಸಕರು ಸಭೆ ಸೇರಿ ಸಂತಸ ಹಂಚಿಕೊಂಡರು. ಅವರ ಅಭಿಮಾನಿಗಳು ಪಟಾಕಿ ಸಿಡಿಸಿ ಸಂಭ್ರಮಿಸಿದರು.

ತೀರ್ಪು ಹೊರಬಿದ್ದ ಕೆಲ ಕ್ಷಣಗಳಲ್ಲೇ ಅದರ ಪ್ರತಿಯನ್ನು ಪಡೆದಿರುವ ಯಡಿಯೂರಪ್ಪ ಅವರು ಅದರ ನಕಲು ಪ್ರತಿಗಳನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ನಿತಿನ್ ಗಡ್ಕರಿ, ಮುಖಂಡರಾದ ಸುಷ್ಮಾ ಸ್ವರಾಜ್, ಅರುಣ್ ಜೇಟ್ಲಿ, ವೆಂಕಯ್ಯ ನಾಯ್ಡು ಮತ್ತಿತರರಿಗೆ ಕಳುಹಿಸಿದ್ದು, ತಕ್ಷಣವೇ ಮುಖ್ಯಮಂತ್ರಿ ಮಾಡಿ ಎನ್ನುವ ಬೇಡಿಕೆ ಇಟ್ಟಿದ್ದಾರೆ.

`ಬಜೆಟ್ ಅಧಿವೇಶನದವರೆಗೆ ಅಥವಾ ಉಡುಪಿ-ಚಿಕ್ಕಮಗಳೂರು ಉಪಚುನಾವಣೆವರೆಗೆ ಕಾಯುವುದು ಸರಿಯಲ್ಲ. ತಕ್ಷಣವೇ ಪಕ್ಷದ ವರಿಷ್ಠರು ಬಂದು ಮತ್ತೆ ಮುಖ್ಯಮಂತ್ರಿ ಮಾಡಬೇಕು~ ಎಂದು ಆಗ್ರಹಪಡಿಸಿದ್ದಾರೆ ಎನ್ನಲಾಗಿದೆ.

ಈ ಸಂಬಂಧ ಅವರು ಪಕ್ಷದ ವರಿಷ್ಠರ ಜತೆ ದೂರವಾಣಿ ಮೂಲಕ ಮಾತನಾಡಿದ್ದಾರೆ. ಆರೋಪ ಮುಕ್ತರಾದ ತಕ್ಷಣವೇ ಮತ್ತೆ ಮುಖ್ಯಮಂತ್ರಿ ಮಾಡುವುದಾಗಿ ಹೇಳಿದ್ದ ವರಿಷ್ಠರು ಈಗ ಆ ಪ್ರಕಾರ ನಡೆದುಕೊಳ್ಳಬೇಕು ಎಂದೂ ಅವರು ತಾಕೀತು ಮಾಡಿದ್ದಾರೆ.

ಡಿವಿಎಸ್ ಸ್ಥಾನ ತ್ಯಜಿಸಲಿ: ಯಡಿಯೂರಪ್ಪ ಅವರು ತಮ್ಮ ಆಪ್ತರ ಬಳಿ ಮಾತನಾಡುತ್ತಾ, `ಇನ್ನಾದರೂ ಸದಾನಂದಗೌಡರು ಮುಖ್ಯಮಂತ್ರಿ ಸ್ಥಾನ ತ್ಯಜಿಸಬೇಕು~ ಎಂದೂ ಹೇಳಿದ್ದಾರೆ.

ಮುಖ್ಯಮಂತ್ರಿಯಾಗುವುದಕ್ಕೂ ಮುನ್ನ ಅವರು ಕೊಟ್ಟಿದ್ದ ವಚನ ಪಾಲಿಸಬೇಕು ಎಂದಿದ್ದಾರೆ.

ಒತ್ತಡ ಹೇರಲು ತಂತ್ರ: ಈ ನಡುವೆ ಯಡಿಯೂರಪ್ಪ ಅವರು ಬೆಳಿಗ್ಗೆ ಮತ್ತು ಸಂಜೆ ತಮ್ಮ ಆಪ್ತರ ಸಭೆ ನಡೆಸಿದ್ದು, ಆ ಸಂದರ್ಭದಲ್ಲಿ ಮತ್ತೆ ಮುಖ್ಯಮಂತ್ರಿ ಮಾಡುವಂತೆ ವರಿಷ್ಠರ ಮೇಲೆ ಒತ್ತಡ ಹೇರುವ ತಂತ್ರಗಾರಿಕೆ ಬಗ್ಗೆ ಚರ್ಚೆ ನಡೆಸಿದ್ದಾರೆ.

ತಮ್ಮ ಬೇಡಿಕೆಗೆ ಹೈಕಮಾಂಡ್ ಸ್ಪಂದಿಸದಿದ್ದರೆ ಶಾಸಕರ ನಿಯೋಗವೊಂದು ಗುರುವಾರ ಅಥವಾ ಶುಕ್ರವಾರ ದೆಹಲಿಗೆ ತೆರಳಿ ವರಿಷ್ಠರನ್ನು ಭೇಟಿ ಮಾಡುವ ಸಾಧ್ಯತೆಯೂ ಇದೆ. ಈ ಹಿನ್ನೆಲೆಯಲ್ಲಿ ತುರ್ತಾಗಿ ನಗರಕ್ಕೆ ಬರುವಂತೆ ಆಪ್ತ ಶಾಸಕರಿಗೆ ಸೂಚಿಸಲಾಗಿದೆ. ವಿಮಾನಯಾನದ ಸಿದ್ಧತೆಗಳು ಕೂಡ ಆರಂಭವಾಗಿವೆ. ಆದರೆ, ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಮಾಡಿ ಎಂದು ಮಾತ್ರ ಕೇಳಲು ದೆಹಲಿಗೆ ಹೋಗುವುದಿಲ್ಲ ಎನ್ನಲಾಗಿದೆ.

ಒಂದು ವೇಳೆ ವರಿಷ್ಠರು ಒತ್ತಡ ತಂತ್ರಕ್ಕೆ ಮಣಿಯದಿದ್ದರೆ ಯಡಿಯೂರಪ್ಪ ಅವರು ತಮ್ಮ ಬೆಂಬಲಿಗ ಶಾಸಕರ ಸಭೆ ಕರೆದು, ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಲಿದ್ದಾರೆ. ನಂತರ ಅವರು ರಾಜ್ಯಪಾಲರನ್ನು ಭೇಟಿ ಮಾಡಿ ಹೊಸ ಸರ್ಕಾರ ರಚನೆಗೆ ಅವಕಾಶ ಕೋರಲಿದ್ದಾರೆ ಎಂದು ಗೊತ್ತಾಗಿದೆ.

ಒಳ್ಳೆಯ ಸುದ್ದಿ: ಯಡಿಯೂರಪ್ಪ ಅವರಿಗೆ ಸಂಬಂಧಿಸಿದ ಹೈಕೋರ್ಟ್ ತೀರ್ಪನ್ನು ಸ್ವಾಗತಿಸಿದ ಗೃಹ ಸಚಿವ ಆರ್.ಅಶೋಕ ಅವರು `ಬಿಜೆಪಿಗೆ ಇದೊಂದು ಒಳ್ಳೆಯ ಸುದ್ದಿ~ ಎಂದು ಹರ್ಷ ವ್ಯಕ್ತಪಡಿಸಿದ್ದಾರೆ.

ತೀರ್ಪು ಹೊರಬಿದ್ದ ತಕ್ಷಣವೇ ಯಡಿಯೂರಪ್ಪ ಅವರ ಆಪ್ತ, ಅಬಕಾರಿ ಸಚಿವ ಎಂ.ಪಿ.ರೇಣುಕಾಚಾರ್ಯ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು. ನಂತರ ಅವರು ಮಾತನಾಡಿ `ಯಡಿಯೂರಪ್ಪ ವಿರುದ್ಧ ಷಡ್ಯಂತ್ರ ನಡೆಸಿದವರಿಗೆ ಈ ತೀರ್ಪಿನಿಂದ ಮುಖಭಂಗವಾಗಿದೆ~ ಎಂದು ಟೀಕಿಸಿದರು.

ವಸತಿ ಸಚಿವ ವಿ.ಸೋಮಣ್ಣ ಸೇರಿದಂತೆ 20ಕ್ಕೂ ಹೆಚ್ಚು ಶಾಸಕರು ಯಡಿಯೂರಪ್ಪ ಅವರ ಮನೆಯಲ್ಲಿ ಹಾಜರಿದ್ದು, ಮುಂದಿನ ಹೋರಾಟದ ರೂಪುರೇಷೆಗಳ ಬಗ್ಗೆ ನಿರಂತರ ಚರ್ಚೆ ನಡೆಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.