ಶನಿವಾರ, ಮೇ 15, 2021
22 °C

ಗರ್ಭಿಣಿಯರ ಆರೈಕೆಗೆ ಹೊಸ ಯೋಜನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶ್ರೀನಗರ (ಪಿಟಿಐ): ಗರ್ಭಿಣಿಯರ ಆರೋಗ್ಯ ರಕ್ಷಣೆ ಮತ್ತು ಆರೈಕೆಗಾಗಿ ಹೊಸ ಯೋಜನೆಯೊಂದನ್ನು ಕೇಂದ್ರ ಸರ್ಕಾರ ಶನಿವಾರ ಪ್ರಕಟಿಸಿದೆ. ಇದರಡಿ ಹೆರಿಗೆಗಿಂತ 6-7 ತಿಂಗಳ ಮೊದಲಿನಿಂದಲೇ ಗರ್ಭಿಣಿಯ ಚಿಕಿತ್ಸೆ, ಔಷಧ, ಆಸ್ಪತ್ರೆ ಪ್ರಯಾಣ ಮತ್ತು ಆಹಾರದ ವೆಚ್ಚವನ್ನು ಸರ್ಕಾರ ಭರಿಸಲಿದೆ.



`ಎಂಟು ವರ್ಷಗಳ ಹಿಂದೆ ಜಾರಿಗೆ ತರಲಾದ ಇಂದಿರಾ ಗಾಂಧಿ ಮಾತೃತ್ವ ಸಹಯೋಗ ಯೋಜನೆಯ ಅಡಿಯಲ್ಲಿ ಗರ್ಭಿಣಿಯರಿಗೆ ಹೆರಿಗೆ ಸಮಯದಲ್ಲಿ ಮಾತ್ರ ಹಣಕಾಸಿನ ನೆರವು ದೊರೆಯುತ್ತಿತ್ತು. ಆದರೆ, ಹೊಸ ಯೋಜನೆಯಲ್ಲಿ ಗರ್ಭಿಣಿಗೆ ಉಚಿತ ಚಿಕಿತ್ಸೆ ನೀಡಲಾಗುವುದು.



ಚಿಕಿತ್ಸೆಗೆಗಾಗಿ ಆಸ್ಪತ್ರೆಗೆ ಬರಲು ಮತ್ತು ಮನೆಗೆ ಹಿಂದಿರುಗಲು ತಗಲುವ  ಪ್ರಯಾಣ ವೆಚ್ಚವನ್ನೂ ಆರೋಗ್ಯ ಸಚಿವಾಲಯ ಭರಿಸಲಿದೆ' ಎಂದು ಕೇಂದ್ರ ಆರೋಗ್ಯ ಸಚಿವ ಗುಲಾಂ ನಬಿ ಆಜಾದ್ ಇಲ್ಲಿ ಸುದ್ದಿಗಾರರಿಗೆ ತಿಳಿಸಿದರು. ಇದಲ್ಲದೆ, ನವಜಾತ ಶಿಶುವಿಗೆ ಬರಬಹುದಾದ ಕಾಯಿಲೆಗಳ ಚಿಕಿತ್ಸಾ ವೆಚ್ಚವೂ ಇದರ ವ್ಯಾಪ್ತಿಗೆ ಬರುತ್ತದೆ ಎಂದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.