ಶುಕ್ರವಾರ, ನವೆಂಬರ್ 15, 2019
27 °C

ಗಲ್ಲು ಶಿಕ್ಷೆಗೆ ಹೈಕೋರ್ಟ್ ತಡೆ

Published:
Updated:

ಚಂಡಿಗಡ (ಪಿಟಿಐ): ರಾಷ್ಟ್ರಪತಿಯವರಿಂದ ಕ್ಷಮಾದಾನ ಅರ್ಜಿ ತಿರಸ್ಕೃತಗೊಂಡ ನಂತರ ಅತ್ಯಾಚಾರ ಪ್ರಕರಣದ ಅಪರಾಧಿ ಧರ್ಮಪಾಲ್‌ಗೆ ನೀಡಿರುವ ಗಲ್ಲು ಶಿಕ್ಷೆಗೆ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ತಡೆಯಾಜ್ಞೆ ನೀಡಿವೆ.ತನ್ನ ಕ್ಷಮಾದಾನ ಅರ್ಜಿ ವಿಚಾರಣೆ ವಿಳಂಬವಾಗಿದೆ ಎಂದು ಧರ್ಮಪಾಲ್, ಹೈಕೋರ್ಟ್‌ನಲ್ಲಿ ತಡೆಯಾಜ್ಞೆ ಕೋರಿ ಸಲ್ಲಿಸಿದ್ದರು.

ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಎ.ಕೆ. ಮಿತ್ತಲ್ ಮತ್ತು ಜಿ.ಎಸ್. ಸಂಧ್‌ವಾಲಿಯಾ ಅವರನ್ನೊಳಗೊಂಡ ವಿಭಾಗೀಯ ಪೀಠ ಹರಿಯಾಣ ಸರ್ಕಾರಕ್ಕೆ ನೋಟಿಸ್ ನೀಡಿದ್ದು, ಇದೇ 10ರೊಳಗೆ ಉತ್ತರ ನೀಡುವಂತೆ ತಿಳಿಸಿದೆ.ರಾಷ್ಟ್ರಪತಿಯವರಿಂದ ಕ್ಷಮಾದಾನದ ಅರ್ಜಿ ತಿರಸ್ಕೃತಗೊಂಡ ಮೇಲೆ ಇದೇ 15ರಂದು ಧರ್ಮಪಾಲ್‌ಗೆ ಗಲ್ಲಿಗೇರಿಸಲು ದಿನ ನಿಗದಿಯಾಗಿತ್ತು.

ಪ್ರತಿಕ್ರಿಯಿಸಿ (+)