ಗಾದಗಿ: ಪರಿಸರ ಜಾಗೃತಿ ಆಂದೋಲನ
ಬೀದರ್: ಉತ್ತಮ ಆರೋಗ್ಯಕ್ಕೆ ಶುದ್ಧ ವಾತಾವರಣ ಅಗತ್ಯ. ಪ್ರತಿಯೊಬ್ಬರು ಹೆಚ್ಚಿನ ಗಿಡ ಮರಗಳು ಬೆಳೆಸಲು ಮುಂದಾಗಬೇಕು ಎಂದು ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ನ ಜಂಟಿ ಕಾರ್ಯದರ್ಶಿ ಪಡಿಂತ ಕೆ. ಬಾಳೂರೆ ತಿಳಿಸಿದರು. ಗಾದಗಿ ಗ್ರಾಮದಲ್ಲಿ ಈಚೆಗೆ ರಾಷ್ಟ್ರೀಯ ಪರಿಸರ ಜಾಗೃತಿ ಆಂದೋಲನದಲ್ಲಿ ಮಾತನಾಡಿದರು.
ಅರಣ್ಯ ಸಂರಕ್ಷಣಾಧಿಕಾರಿ ಎಸ್. ವೆಂಕಟೇಶ ವಿದ್ಯಾರ್ಥಿಗಳಿಗೆ ಸಸಿಗಳನ್ನು ವಿತರಿಸಿದರು. ಗ್ರಾಮ ಪಂಚಾಯಿತಿ ಅಧ್ಯಕ್ಷ ಸೂರ್ಯಕಾಂತ ಪಾಟೀಲ್ ಅಧ್ಯಕ್ಷತೆ ವಹಿಸಿದ್ದರು. ಅರಣ್ಯಾಧಿಕಾರಿ ಪ್ರೇಮಶೇಖರ, ಮುಖ್ಯಗುರು ರುಕ್ಮಿಣಿ, ಎಸ್.ಡಿ.ಎಂ.ಸಿ ಅಧ್ಯಕ್ಷ ಶಿವರಾಜ ಬಸಪ್ಪ ಮತ್ತಿತರರು ಇದ್ದರು.
ಜಾನ್ ವೇಸ್ಲಿ ಸ್ವಾಗತಿಸಿದರು. ಗೋಪಾಲ ವಂದಿಸಿದರು. ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ ಹಾಗೂ ಶುಭಾಂಗಿನಿ ಶಿಕ್ಷಣ ಮತ್ತು ಚಾರಿಟೇಬಲ್ ಟ್ರಸ್ಟ್ಗಳ ಸಹಯೋಗದಲ್ಲಿ ಕಾರ್ಯಕ್ರಮದ ಆಯೋಜಿಸಲಾಗಿತ್ತು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.