ಮಂಗಳವಾರ, ಮೇ 11, 2021
24 °C

ಗಾಯಗೊಂಡಿದ್ದ ಅಧಿಕಾರಿ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಗುವಾಹಟಿ (ಪಿಟಿಐ): ರಸ್ತೆ ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ಬೇಹುಗಾರಿಕೆ ದಳದ ಹೆಚ್ಚುವರಿ ನಿರ್ದೇಶಕ ಆರ್.ಎನ್.ಬೆಹುರಾ (56) ಭಾನುವಾರ ಕೊನೆಯುಸಿರೆಳೆದಿದ್ದಾರೆ.ಆರು ದಿನಗಳಿಂದ ಇಲ್ಲಿನ ನರರೋಗ ಸಂಶೋಧನಾ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು, ಪತ್ನಿ ಹಾಗೂ ಪುತ್ರನನ್ನು ಅಗಲಿದ್ದಾರೆ. ಒಡಿಶಾ ಮೂಲದ ಬೆಹುರಾ, ಮಣಿಪುರ- ತ್ರಿಪುರಾ ಕೇಡರ್‌ನ 1979ನೇ ತಂಡದ ಐಪಿಎಸ್ ಅಧಿಕಾರಿಯಾಗಿದ್ದರು. ಗೋಲ್‌ಘಾಟ್ ಜಿಲ್ಲೆಯ ನುಮಾಲಿಗಡದ ತೈಲ ಸಂಸ್ಕರಣಾಗಾರದಲ್ಲಿ ಸಂಭವಿಸಿದ್ದ ಸ್ಫೋಟದ ತನಿಖೆ ನಡೆಸಿ ಗುವಾಹಟಿಗೆ ಹಿಂದಿರುಗುತ್ತಿದ್ದರು. ಮಾರ್ಗದಲ್ಲಿ ಬೆಹುರಾ ಅವರಿದ್ದ ಕಾರು ಮತ್ತು ಲಾರಿ ಮಧ್ಯೆ ಡಿಕ್ಕಿ ಸಂಭವಿಸಿತ್ತು.ಬೆಹುರಾ ಅವರ ಜೊತೆಯಲ್ಲಿ ಪ್ರಯಾಣಿಸುತ್ತಿದ್ದ ಅಸ್ಸಾಂನ ಹೆಚ್ಚುವರಿ ಉಪ ಪೊಲೀಸ್ ಮಹಾನಿರ್ದೇಶಕ ಪಲ್ಲಬ್ ಭಟ್ಟಾಚಾರ್ಯ ಕೂಡಾ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೆ ಅವರ ಸ್ಥಿತಿ ಸ್ಥಿರವಾಗಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.