ಶುಕ್ರವಾರ, ಏಪ್ರಿಲ್ 16, 2021
27 °C

ಗಿನ್ನೆಸ್ ದಾಖಲೆಗೆ ಮಧುಮೇಹ ಜಾಗೃತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಧುಮೇಹ ಜಾಗೃತಿ ಕಾರ್ಯಕ್ರಮಗಳನ್ನು ಏರ್ಪಡಿಸುತ್ತಲೇ ಗಿನ್ನೆಸ್‌ದಾಖಲೆ ಸೇರ್ಪಡೆಯಾದ ಹೆಮ್ಮೆ ನಗರದ ಸಂಸ್ಥೆಯೊಂದಕ್ಕೆ ದೊರಕಿದೆ.ಮಧುಮೇಹ ಮತ್ತು ಜೀವನಶೈಲಿಯ ಬಗ್ಗೆ ಜಾಗೃತಿ ಮೂಡಿಸುವ ನೊವೊ ನಾರ್ಡಿಸ್ಕ್ ಶಿಕ್ಷಣ ಪ್ರತಿಷ್ಠಾನಕ್ಕೆ ಈ ಕೀರ್ತಿ ಪ್ರಾಪ್ತಿಯಾಗಿದೆ.ಈಚೆಗೆ ನಗರದ ಅರಮನೆ ಮೈದಾನದಲ್ಲಿ 2621 ಜನರಿಗೆ ಮಧುಮೇಹ ತಪಾಸಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಲೋಕಾಯುಕ್ತ ಸಂತೋಷ ಹೆಗ್ಡೆ ಅವರು ಮಾತನಾಡಿದರು. ಕಳೆದ 35 ವರ್ಷಗಳಿಂದ ಮಧುಮೇಹದೊಂದಿಗೆ ಸಹಚರ್ಯ ನನ್ನದಾಗಿದೆ.

ಉತ್ತಮ ಜೀವನಶೈಲಿ, ಆರೋಗ್ಯಕರ ಅಭ್ಯಾಸಗಳಿಂದಾಗಿ ಮಧುಮೇಹವನ್ನು ನಿರ್ವಹಿಸುವುದು ಸರಳವಾಗಿದೆ. ಮಧುಮೇಹದ ಬಗ್ಗೆ ಜನರಲ್ಲಿ ತಿಳುವಳಿಕೆ ಮೂಡಿಸುವ ಮತ್ತು ಮಾಹಿತಿ ನೀಡುವ ಈ ಕಾರ್ಯಕ್ರಮ ಶ್ಲಾಘನೀಯವಾಗಿದೆ ಎಂದರು.ಇದೇ ಸಂದರ್ಭದಲ್ಲಿ ಗಿನ್ನೆಸ್ ದಾಖಲೆ ಪುಸ್ತಕವನ್ನು ನಿರ್ವಹಿಸುವ ಅಧಿಕಾರಿಗಳೂ ಹಾಜರಿದ್ದು, ಗಿನ್ನೆಸ್ ದಾಖಲೆ ನಿರ್ಮಾಣದ ಪ್ರಮಾಣ ಪತ್ರವನ್ನು ಸಂಸ್ಥೆಗೆ ಹಸ್ತಾಂತರಿಸಿದರು.ಪ್ರಮಾಣ ಪತ್ರ ಸ್ವೀಕರಿಸಿ ಮಾತನಾಡಿದ ಡಿಸೋಜಾ ಅವರು `ಈ ದಾಖಲೆಯಿಂದಾಗಿ ಸಾಮಾಜಿಕ ಜವಾಬ್ದಾರಿ ಹೆಚ್ಚಿದಂತಾಗಿದೆ. ಮಧುಮೇಹ ಇದೀಗ ಜೀವನಶೈಲಿಯ ರೋಗವಾಗಿ ಬದಲಾಗಿದೆ. ಆರೋಗ್ಯಕರ ಜೀವನಶೈಲಿಯಿಂದ ಮಧುಮೇಹವನ್ನು ನಿಭಾಯಿಸುವ ಬಗ್ಗೆ ಹೆಚ್ಚು ಜಾಗೃತಿ ಮೂಡಿಸಬೇಕಾಗಿದೆ ಎಂದು ಅಭಿಪ್ರಾಯ ಪಟ್ಟರು.ಈ ನಿಟ್ಟಿನಲ್ಲಿ ರಾಜ್ಯ ಮತ್ತು ರಾಷ್ಟ್ರೀಯ ಮಟ್ಟದಲ್ಲಿಯೂ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಬಾಲ್ಯದಲ್ಲಿಯೇ ಕಾಣಿಸಿಕೊಳ್ಳುತ್ತಿರುವ ಮಧುಮೇಹದ ಬಗ್ಗೆ ಸಂಶೋಧನೆ ಹಾಗೂ ಉಪನ್ಯಾಸಗಳನ್ನು ಏರ್ಪಡಿಸಲಾಗುತ್ತಿದೆ. ಪಾಲಕರಲ್ಲಿ ಈ ಬಗ್ಗೆ ಹೆಚ್ಚು ಜಾಗೃತಿ ಮೂಡಿಸುವಂಥ ಯೋಜನೆಗಳನ್ನು ರೂಪಿಸಲಾಗುವುದು ಎಂದು ತಿಳಿಸಿದರು. ಮಧುಮೇಹದ ವಿವಿಧ ಬಗೆಗಳ ಬಗ್ಗೆ ತಿಳಿಸಿಕೊಡಲಾಯಿತು.  

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.