ಉಜಿರೆ: ‘ಶಾಲೆಗಳಲ್ಲಿ ಯೋಗ ಮತ್ತು ನೈತಿಕ ಶಿಕ್ಷಣ’ ಯೋಜನೆಯಡಿ ಧರ್ಮಸ್ಥಳದ ಶಾಂತಿವನ ಟ್ರಸ್ಟ್ ಆಯೋಜಿಸಿದ್ದ ಯೋಗ ಪ್ರದರ್ಶನ ಗಿನ್ನೆಸ್ ವಿಶ್ವ ದಾಖಲೆಯ ಮಾನ್ಯತೆ ಪಡೆದಿದೆ.

ಟ್ರಸ್ಟ್ ಆಶ್ರಯದಲ್ಲಿ 2013ರ ಡಿಸೆಂಬರ್ 13ರಂದು ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ 47 ಕೇಂದ್ರಗಳಲ್ಲಿ ಏಕಕಾಲದಲ್ಲಿ 62,824 ವಿದ್ಯಾರ್ಥಿಗಳು ಅರ್ಧ ಗಂಟೆ ಯೋಗ ಪ್ರದರ್ಶನ ನೀಡಿದ್ದು ‘ವಿಶ್ವದ ಅತ್ಯಂತ ದೊಡ್ಡ ಯೋಗ ಪ್ರದರ್ಶನ’ ಎಂದು ಗಿನ್ನೆಸ್ ಅಧಿಕಾರಿಗಳು ದೃಢೀಕರಿಸಿದ್ದಾರೆ.
ಟ್ರಸ್್ಟ ವತಿಯಿಂದ ರಾಜ್ಯದ 9 ಜಿಲ್ಲೆಗಳಲ್ಲಿ 3 ಲಕ್ಷ ವಿದ್ಯಾರ್ಥಿಗಳಿಗೆ ಯೋಗ ತರಬೇತಿ ನೀಡಲಾಗಿದೆ.

ಬೆಂಗಳೂರಿನ ರಾಜಭವನದಲ್ಲಿ ಏಪ್ರಿಲ್ 3 ರಂದು ಸಂಜೆ 6ಕ್ಕೆ ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ಅವರು ಶಾಂತಿವನ ಟ್ರಸ್್ಟಗೆ ಗಿನ್ನೆಸ್ ಪ್ರಮಾಣಪತ್ರ ನೀಡುವರು. ಲಂಡನ್ನ ಗಿನ್ನೆಸ್ ಅಧಿಕಾರಿಗಳು ಸಮಾರಂಭದಲ್ಲಿ ಭಾಗವಹಿಸುವರು. ಧರ್ಮಸ್ಥಳದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಅವರು ಅಧ್ಯಕ್ಷತೆ ವಹಿಸುವರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.