ಸೋಮವಾರ, ಜೂನ್ 14, 2021
22 °C

ಗಿರಿಜನ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಾಮರಾಜನಗರ: ಜಿಲ್ಲೆಯ ಬಿಳಿಗಿರಿರಂಗನಬೆಟ್ಟದ ಚಿಕ್ಕಸಂಪಿಗೆ ಜಾತ್ರೆಗೆ ತೆರಳಿದ್ದ ಬೇಡಗುಳಿಯ ಗಿರಿಜನ ಯುವತಿ ಮೇಲೆ ಮೂವರು ಕಿಡಿಗೇಡಿಗಳು ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.ಪುಣಜನೂರು ಗ್ರಾಮದ ಶಿವಲಿಂಗ, ಮಹೇಶ್ ಹಾಗೂ ನಾಗೇಶ್ ಎಂಬುವರು ಈ ಕೃತ್ಯ ಎಸಗಿದ್ದು, ತಲೆತಪ್ಪಿಸಿಕೊಂಡಿದ್ದಾರೆ.ಯುವತಿಯು ಜಾತ್ರೆಗೆ ಹೋಗಿದ್ದ ವೇಳೆ ಆರೋಪಿಗಳು ಆಕೆಯನ್ನು ಕಾಡಿನೊಳಕ್ಕೆ ಹೊತ್ತೊಯ್ದು ಅತ್ಯಾಚಾರ ಎಸಗಿದ್ದಾರೆ. ಈ ಘಟನೆಯಿಂದ ಆಘಾತಗೊಂಡ ಆಕೆ ಪೋಷಕರಿಗೆ ಮೊದಲು ಮಾಹಿತಿ ನೀಡಿಲ್ಲ.ಆತಂಕಗೊಂಡ ಪೋಷಕರು ಆಕೆಯನ್ನು ವಿಚಾರಿಸಿದಾಗ ಘಟನೆ ಬಗ್ಗೆ ತಿಳಿಸಿದ್ದಾಳೆ. ಈ ಹಿನ್ನೆಲೆಯಲ್ಲಿ ಆಕೆಯ ಪೋಷಕರು ರಾಮಸಮುದ್ರದ ಪೂರ್ವ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.`ಯುವತಿ ನೀಡಿದ ಮಾಹಿತಿ ಮೇರೆಗೆ ಮೂವರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಕೂಡಲೇ, ಆರೋಪಿಗಳನ್ನು ಬಂಧಿಸಲಾಗುವುದು~ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ. ರಾಜೇಂದ್ರಪ್ರಸಾದ್ `ಪ್ರಜಾವಾಣಿ~ಗೆ ತಿಳಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.