ಬುಧವಾರ, ಮೇ 12, 2021
24 °C

ಗಿಲಾನಿ ನ್ಯಾಯಾಂಗ ನಿಂದನೆ: ನಾಳೆ ತೀರ್ಪು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಇಸ್ಲಾಮಾಬಾದ್ (ಐಎಎನ್‌ಎಸ್): ನ್ಯಾಯಾಂಗ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಕಿಸ್ತಾನದ ಪ್ರಧಾನಿ ಯೂಸುಫ್ ರಜಾ ಗಿಲಾನಿ ಅವರ ವಿರುದ್ಧ ದಾಖಲಾಗಿರುವ ಮೊಕದ್ದಮೆಯ ತೀರ್ಪನ್ನು ಸುಪ್ರೀಂಕೋರ್ಟ್ ಗುರುವಾರ ಪ್ರಕಟಿಸಲಿದೆ.

ಪಾಕ್ ಅಧ್ಯಕ್ಷ ಆಸಿಫ್ ಅಲಿ ಜರ್ದಾರಿ ಅವರ ವಿರುದ್ಧದ ಭ್ರಷ್ಟಾಚಾರ ಪ್ರಕರಣವನ್ನು ಮರುತನಿಖೆ ನಡೆಸುವಂತೆ `ಸ್ವಿಸ್~ ಸರ್ಕಾರಕ್ಕೆ ಪತ್ರ ಬರೆಯದೇ ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಿದ್ದಕ್ಕಾಗಿ ಗಿಲಾನಿ ಮೇಲೆ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಾಗಿತ್ತು.  ನ್ಯಾಯಮೂರ್ತಿ ನಾಸಿರ್ ಉಲ್ ಮುಲ್ಕ್ ಅವರ ನೇತೃತ್ವದ ಏಳು ಸದಸ್ಯರ ವಿಶೇಷ ಪೀಠ ಈ ಪ್ರಕರಣದ ವಿಚಾರಣೆ ನಡೆಸಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.