ಗುಂಡಿನ ಚಕಮಕಿ: ಪೊಲೀಸ್ ಅಧಿಕಾರಿ ಸಾವು

7

ಗುಂಡಿನ ಚಕಮಕಿ: ಪೊಲೀಸ್ ಅಧಿಕಾರಿ ಸಾವು

Published:
Updated:

ಶ್ರೀನಗರ(ಪಿಟಿಐ): ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಭದ್ರತಾ ಸಿಬ್ಬಂದಿ ಹಾಗೂ ಗೆರಿಲ್ಲಾ ಗುಂಪಿನ ಮಧ್ಯೆ ಮಂಗಳವಾರ ನಡೆದ ಗುಂಡಿನ ಚಕಮಕಿಯಲ್ಲಿ ಒಬ್ಬ ಪೊಲೀಸ್ ಅಧಿಕಾರಿ ಮೃತಪಟ್ಟಿದ್ದು, ಮೂವರು ಪೊಲೀಸರು ಗಾಯಗೊಂಡಿದ್ದಾರೆ.ಇಲ್ಲಿನ ಸೊಪೊರಿ ನಗರದಿಂದ 55 ಕಿ.ಮೀ. ದೂರದ ಪ್ರದೇಶದಲ್ಲಿ ಮಂಗಳವಾರ ಬೆಳಿಗ್ಗೆ ಗುಂಡಿನ ಚಕಮಕಿ ನಡೆದಿದೆ.ಘಟನೆಯಲ್ಲಿ ಎಎಸ್ಐ ಒಬ್ಬರು ಗಾಯಗೊಂಡಿದ್ದರು. ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ. ಗಾಯಗೊಂಡ ಮೂವರು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry