ಗುರುವಾರ , ಮೇ 19, 2022
24 °C

ಗುಂಡು ಹಾರಿಸಿಕೊಂಡು ಪೊಲೀಸ್ ಕಾನ್‌ಸ್ಟೇಬಲ್ ಆತ್ಮಹತ್ಯೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಾಮರಾಜನಗರ: ಜಿಲ್ಲಾಧಿಕಾರಿ ನಿವಾಸದ ಭದ್ರತೆಗೆ ನಿಯೋಜಿಸಿದ್ದ ಪೊಲೀಸ್ ಕಾನ್‌ಸ್ಟೇಬಲ್ ಬಂದೂಕಿನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದಲ್ಲಿ ಶುಕ್ರವಾರ ನಡೆದಿದೆ.

ಗುಂಡ್ಲುಪೇಟೆ ತಾಲ್ಲೂಕಿನ ಬೆಳವಾಡಿ ಗ್ರಾಮದ ಮಣಿ (24) ಮೃತಪಟ್ಟವರು.ಇಲ್ಲಿನ ಹೌಸಿಂಗ್‌ಬೋರ್ಡ್ ಕಾಲೊನಿಯಲ್ಲಿ ಜಿಲ್ಲಾಧಿಕಾರಿಯ ಮನೆಯಿದೆ. ಭದ್ರತೆಗಾಗಿ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಮೂವರು ಪೊಲೀಸ್ ಕಾನ್‌ಸ್ಟೇಬಲ್‌ಗಳನ್ನು ನಿಯೋಜಿಸಲಾಗಿತ್ತು. ಮಧ್ಯಾಹ್ನದ ಪಾಳಿಗೆ ಕರ್ತವ್ಯ ನಿರ್ವಹಿಸಲು ಬಂದ ಮಣಿ ಭದ್ರತಾ ಕೊಠಡಿಯಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಆತ್ಮಹತ್ಯೆಗೂ ಮೊದಲು ಮೂರು ಪುಟಗಳ ಪತ್ರ ಬರೆದಿಟ್ಟಿದ್ದು, ಪ್ರೇಮ ವೈಫಲ್ಯದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ವಿವರಿಸಿದ್ದಾರೆ. ಮಧ್ಯಾಹ್ನ ಕರ್ತವ್ಯಕ್ಕೆ ಆತ ಬಂದ ವೇಳೆ ಕೊಠಡಿಯಲ್ಲಿ ಮತ್ತೊಬ್ಬ ಸಹದ್ಯೋಗಿ ಇದ್ದರು.ಅವರನ್ನ್ನು ಹೋಟೆಲ್‌ನಿಂದ ಊಟ ತರುವಂತೆ ಕಳುಹಿಸಿ ನಂತರ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಗುಂಡಿನ ಶಬ್ದ ಕೇಳಿದ ತಕ್ಷಣ ರಸ್ತೆಯಲ್ಲಿ ಸಂಚರಿಸುತ್ತಿದ್ದ ಜನರು ಸ್ಥಳಕ್ಕೆ ಬಂದು ನೋಡಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಗೊತ್ತಾಗಿದೆ.ಜಿಲ್ಲಾಧಿಕಾರಿ ಕೆ.ಆರ್. ಸುಂದರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ. ರಾಜೇಂದ್ರ ಪ್ರಸಾದ್ ಮತ್ತು ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.