ಗುಂಡ್ಲುಪೇಟೆ: ಕೆರೆಗಳ ಅಭಿವೃದ್ಧಿಗೆ ಒತ್ತು

7
ಜಿಲ್ಲಾ ಉಸ್ತುವಾರಿ ಸಚಿವ ಎಚ್.ಎಸ್. ಮಹದೇವಪ್ರಸಾದ್ ಹೇಳಿಕೆ

ಗುಂಡ್ಲುಪೇಟೆ: ಕೆರೆಗಳ ಅಭಿವೃದ್ಧಿಗೆ ಒತ್ತು

Published:
Updated:

ಗುಂಡ್ಲುಪೇಟೆ: ತಾಲ್ಲೂಕಿನ ಕೆರೆ- ಕಟ್ಟೆಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಎಸ್. ಮಹದೇವಪ್ರಸಾದ್ ತಿಳಿಸಿದರು.ತಾಲ್ಲೂಕಿನ ಬೆರಟಹಳ್ಳಿಯಲ್ಲಿ ಪ್ರಾಥಮಿಕ ಆರೋಗ್ಯ ಉಪ ಕೇಂದ್ರ ಕಟ್ಟಡ ನಿರ್ಮಾಣಕ್ಕೆ ಸೋಮವಾರ  ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು. ತಾಲ್ಲೂಕಿನಲ್ಲಿ ಅಗತ್ಯ ಪ್ರಮಾಣಕ್ಕಿಂತ ಹೆಚ್ಚಿನ ಆಸ್ಪತ್ರೆ ಮತ್ತು ಕಾಲೇಜು ನಿರ್ಮಿಸಲಾಗಿದೆ. ತ್ರಿಯಂಬಕ ಪುರ  ಮತ್ತು ಬೆರಟಹಳ್ಳಿ ಸಂಪರ್ಕ ರಸ್ತೆ ಕಾಮಗಾರಿ ಮುಂದಿನ ವರ್ಷ ಪೂರ್ಣಗೊಳ್ಳಲಿದೆ ಎಂದು ಹೇಳಿದರು.ಗ್ರಾಮಸ್ಥರ ಬಹುದಿನಗಳ ಬೇಡಿಕೆ ಯಾದ ಸಮುದಾಯ ಭವನ ನಿರ್ಮಾಣ ಮತ್ತು ಗುರುಮಲ್ಲೇಶ್ವರ ಮಠದ ಜೀರ್ಣೋದ್ಧಾರ ಕಾಮಗಾರಿ ಶೀಘ್ರದಲ್ಲೇ ಕೈಗೆತ್ತಿಕೊಳ್ಳುವುದಾಗಿ ಭರವಸೆ ನೀಡಿದರು.ಜಿಲ್ಲಾ ವೈದ್ಯಾಧಿಕಾರಿ ಪಾಂಡು ವಿಜಯನ್ ಮಾತನಾಡಿ, ತಾಲ್ಲೂಕಿನಲ್ಲಿ 80 ಉಪ ಕೇಂದ್ರದ ಕಟ್ಟಡಗಳಿದ್ದು, 30 ಕಟ್ಟಡಗಳು ಸ್ವಂತ ಕಟ್ಟಡಗಳಾಗಿವೆ ಎಂದು ತಿಳಿಸಿದರು.ಜಿ.ಪಂ. ಅಧ್ಯಕ್ಷೆ ನಾಗಶ್ರೀ ಪ್ರತಾಪ್, ಉಪಾಧ್ಯಕ್ಷ ಪಿ. ಮಹದೇವಪ್ಪ, ತಾ. ಪಂ. ಅಧ್ಯಕ್ಷೆ ಗಾಯತ್ರಿ ನಾಗೇಶ್, ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷ ನಂಜಪ್ಪ, ದೇಪಾಪುರ ಸಿದ್ದಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಬಿ. ರಾಜಶೇಖರ್, ತಾಲ್ಲೂಕು ವೈದ್ಯಾಧಿ ಕಾರಿ ನರೇಂದ್ರಬಾಬು ಇತರರು ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry