ಗುಜರಾತ್‌ಗೆ ಸಿ.ಎಂ

ಭಾನುವಾರ, ಮೇ 26, 2019
31 °C

ಗುಜರಾತ್‌ಗೆ ಸಿ.ಎಂ

Published:
Updated:

ಬೆಂಗಳೂರು: ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಹಮ್ಮಿಕೊಂಡಿರುವ ಮೂರು ದಿನಗಳ ಉಪವಾಸ ಸತ್ಯಾಗ್ರಹದಲ್ಲಿ (ಸದ್ಭಾವನಾ ಮಿಷನ್) ಭಾಗವಹಿಸಿ, ಅವರಿಗೆ ಬೆಂಬಲ ಸೂಚಿಸುವ ಸಲುವಾಗಿ ರಾಜ್ಯದ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಅವರು ಭಾನುವಾರ ಅಹಮದಾಬಾದ್‌ಗೆ ತೆರಳುವರು.ಅವರು ಮೋದಿ ಜತೆ ಸಂಜೆವರೆಗೆ ಸತ್ಯಾಗ್ರಹದಲ್ಲಿ ಭಾಗವಹಿಸುವರು. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯೂ ಆದ ಸಂಸದ ಅನಂತಕುಮಾರ್ ಅವರೂ ಕೂಡ ತೆರಳಲಿದ್ದಾರೆ. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರೂ ತೆರಳುವ ಸಾಧ್ಯತೆ ಇದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry