ಶನಿವಾರ, ಏಪ್ರಿಲ್ 17, 2021
30 °C

ಗುಜರಾತ್ ಗಲಭೆ: ನಾರಾಯಣನ್, ಅಟಲ್ ಪತ್ರ ಬಹಿರಂಗಕ್ಕೆ ತಡೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಐಎಎನ್‌ಎಸ್): ಗುಜರಾತ್‌ನಲ್ಲಿ 2002ರಲ್ಲಿ ನಡೆದ ಗಲಭೆ ಕುರಿತಂತೆ ಆಗಿನ ರಾಷ್ಟ್ರಪತಿ ಕೆ.ಆರ್. ನಾರಾಯಣನ್ ಹಾಗೂ ಪ್ರಧಾನಿಯಾಗಿದ್ದ ವಾಜಪೇಯಿ ನಡುವಿನ ಪತ್ರ ವ್ಯವಹಾರವನ್ನು ಬಹಿರಂಗಪಡಿಸುವಂತೆ ಕೇಂದ್ರ ಮಾಹಿತಿ ಆಯೋಗ ನೀಡಿದ್ದ ಆದೇಶವನ್ನು ದೆಹಲಿ ಹೈಕೋರ್ಟ್ ಬುಧವಾರ ರದ್ದು ಮಾಡಿದೆ.ಗಲಭೆಗೆ ಸಂಬಂಧಿಸಿದಂತೆ 2002ರ ಫೆ. 28ರಿಂದ ಮಾರ್ಚ್ 15ರ ವರೆಗೆ ನಾರಾಯಣನ್ ಅವರು ವಾಜಪೇಯಿ ಅವರಿಗೆ ಬರೆದಿದ್ದ ಪತ್ರಗಳನ್ನು ಬಹಿರಂಗಪಡಿಸುವಂತೆ 2006ರ ಆ.8ರಂದು ಮಾಹಿತಿ ಆಯೋಗ ಕೇಂದ್ರಕ್ಕೆ ನಿರ್ದೇಶನ ನೀಡಿತ್ತು.ಮಾಹಿತಿ ಹಕ್ಕು ಕಾಯ್ದೆ ಅಡಿಯಲ್ಲಿ ಈ ಪತ್ರಗಳನ್ನು ಬಹಿರಂಗಪಡಿಸುವಂತೆ ಕೋರಿ ಸಿ.ರಮೇಶ್ ಅರ್ಜಿ ಸಲ್ಲಿಸಿದ್ದರು. ಆಯೋಗದ ಆದೇಶವನ್ನು ಪ್ರಶ್ನಿಸಿ ಕೇಂದ್ರ ದೆಹಲಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿತ್ತು. `2006ರ ಆ. 8ರಂದು ಮಾಹಿತಿ ಆಯೋಗ ನೀಡಿದ್ದ ಆದೇಶ ರದ್ದುಮಾಡಬಹುದು. ಆಯೋಗ ಪತ್ರಗಳನ್ನು ಬಹಿರಂಗಪಡಿಸುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಲಾಗದು~ ಎಂದು ನ್ಯಾಯಮೂರ್ತಿ ಅನಿಲ್ ಕುಮಾರ್ ತಿಳಿಸಿದರು.

 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.