ಗುಜರಾತ್ ಮತ್ತು ಹಿಮಾಚಲ ಪ್ರದೇಶ ಚುನಾವಣೆ ದಿನಾಂಕ ಪ್ರಕಟ

7

ಗುಜರಾತ್ ಮತ್ತು ಹಿಮಾಚಲ ಪ್ರದೇಶ ಚುನಾವಣೆ ದಿನಾಂಕ ಪ್ರಕಟ

Published:
Updated:

ನವದೆಹಲಿ (ಪಿಟಿಐ): ಗುಜರಾತ್ ಮತ್ತು ಹಿಮಾಚಲ ಪ್ರದೇಶಗಳ ವಿಧಾನಸಭೆಯ ಚುನಾವಣೆ ಕುರಿತಂತೆ  ಕೇಂದ್ರ ಚುನಾವಣಾ ಆಯೋಗವು ಬುಧವಾರ ದಿನಾಂಕಗಳನ್ನು ಪ್ರಕಟಿಸಿದೆ.

 

ಗುಜರಾತ್ ವಿಧಾನಸಭೆಗೆ 2 ಹಂತಗಳಲ್ಲಿ ನಡೆಯುವ ಚುನಾವಣೆಯಲ್ಲಿ ಮೊದಲ ಹಂತದ ಮತದಾನವು ಡಿಸೆಂಬರ್ 13 ರಂದು ಹಾಗೂ ಎರಡನೇಯ ಹಂತದ ಮತದಾನವು ಡಿಸೆಂಬರ್ 17 ರಂದು ನಡೆಯಲಿದೆ.ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆಯು ನವೆಂಬರ್ 4ರಂದು ನಡೆಯಲಿದ್ದು, ಈ ಎರಡು ವಿಧಾನ ಸಭೆಗಳ ಮತ ಎಣಿಕೆ ಕಾರ್ಯವು ಡಿಸೆಂಬರ್ 20 ರಂದು ನಡೆಯಲಿದೆ.

 

ಈ ಎರಡು ವಿಧಾನಸಭೆಗಳ ಚುನಾವಣೆಗೆ ಸಂಬಂಧಿಸಿದಂತೆ ಅಕ್ಟೋಬರ್ 10 ರಂದು ಅಧಿಸೂಚನೆ ಪ್ರಕಟವಾಗಲಿದ್ದು, ಅ.17 ರಂದು ನಾಮಪತ್ರ ಸಲ್ಲಿಕೆಯ ಕೊನೆ ಹಾಗೂ ಅ.20 ರಂದು ನಾಮಪತ್ರ ಹಿಂತೆಗೆದುಕೊಳ್ಳಲು ಕೊನೆಯ ದಿನವಾಗಿದೆ ಎಂದು ಚುನಾವಣೆ ಆಯೋಗ ತಿಳಿಸಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry