ಗುಜರಾತ್ ಮುಖ್ಯಮಂತ್ರಿ ಆನಂದಿಬೆನ್ ರಾಜೀನಾಮೆ

ಅಹಮದಾಬಾದ್: ಗುಜರಾತ್ ಮುಖ್ಯಮಂತ್ರಿ ಸ್ಥಾನಕ್ಕೆ ಆನಂದಿಬೆನ್ ಪಟೇಲ್ ರಾಜೀನಾಮೆ ನೀಡಿದ್ದಾರೆ. ನವೆಂಬರ್ ತಿಂಗಳಲ್ಲಿ ತನಗೆ 75 ವರ್ಷ ತುಂಬುತ್ತಿರುವ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ಕೊಡಲು ಸಿದ್ಧಳಾಗಿದ್ದೇನೆ ಎಂದು ಸೋಮವಾರ ಫೇಸ್ಬುಕ್ನಲ್ಲಿ ಪೋಸ್ಟ್ ಹಾಕಿದ ನಂತರ ಆನಂದಿ ಬೆನ್ ತಮ್ಮ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ಸಲ್ಲಿಸಿದ್ದಾರೆ.
ಮುಖ್ಯಮಂತ್ರಿ ಸ್ಥಾನದಿಂದ ಬಿಡುಗಡೆ ಕೋರಿ 2 ತಿಂಗಳ ಹಿಂದೆಯೇ ಮನವಿ ಮಾಡಿಕೊಂಡಿದ್ದೆ. ನವೆಂಬರ್ ತಿಂಗಳಿನಲ್ಲಿ 75 ವರ್ಷ ತುಂಬುತ್ತಿರುವ ಹಿನ್ನೆಲೆಯಲ್ಲಿ ಸಿಎಂ ಸ್ಥಾನದಿಂದ ಕೆಳಗಿಳಿಯಲು ಇದು ತುಂಬಾ ಪ್ರಸಕ್ತವಾದ ಸಮಯವಾಗಿದೆ. ಈ ಮೂಲಕ 2017ರಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗಾಗಿ ಹೊಸ ನಾಯಕತ್ವ ವಹಿಸಿಕೊಳ್ಳುವವರಿಗೆ ಹೆಚ್ಚಿನ ಸಮಯಾವಕಾಶ ದೊರೆಯಲಿದೆ ಎಂದು ಆನಂದಿಬೆನ್ ಫೇಸ್ಬುಕ್ ನಲ್ಲಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಗುಜರಾತ್ನ ಮೊದಲ ಮಹಿಳಾ ಮುಖ್ಯಮಂತ್ರಿಯಾಗಿ ಅಧಿಕಾರಕ್ಕೇರಿದ್ದ ಬೆನ್, ರಾಜ್ಯದಲ್ಲಿ ಇತ್ತೀಚೆಗೆ ನಡೆದ ಪಟೇಲ್ ಸಮುದಾಯದ ಹೋರಾಟ, ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳನ್ನು ನಿಭಾಯಿಸುವಲ್ಲಿ ವಿಫಲರಾಗಿದ್ದರು. ಈ ವೈಫಲ್ಯದ ಹೊಣೆ ಹೊತ್ತು ಬೆನ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ ಎಂದು ಹೇಳಲಾಗುತ್ತಿದೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.