ಗುರುವಾರ , ಜೂನ್ 24, 2021
25 °C

ಗುಜರಾತ್ ವಿಧಾನಸಭೆಯಲ್ಲೂ ಅದೇ ಕಥೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಗಾಂಧಿನಗರ (ಪಿಟಿಐ): ಗುಜರಾತ್ ವಿಧಾನಸಭೆಯಲ್ಲೂ ಕಲಾಪ ನಡೆಯುತ್ತಿದ್ದ ವೇಳೆ ಬಿಜೆಪಿಯ ಇಬ್ಬರು ಶಾಸಕರು ತಮ್ಮ ಟ್ಯಾಬ್ಲೆಟ್‌ನಲ್ಲಿ ಅಶ್ಲೀಲ ಚಿತ್ರ ವೀಕ್ಷಣೆ ಮಾಡಿರುವ ಪ್ರಕರಣ ಈಗ ಬಯಲಾಗಿದೆ.ಬುಧವಾರ ಈ ಪ್ರಕರಣ ವಿಧಾನಸಭಾ ಅಧಿವೇಶನದಲ್ಲಿ ಪ್ರಸ್ತಾಪವಾಗಿ ಭಾರಿ ಕೋಲಾಹಲಕ್ಕೆ ಕಾರಣವಾಯಿತು. ಈ ಇಬ್ಬರು ಶಾಸಕರನ್ನು ವಜಾಗೊಳಿಸಬೇಕು ಎಂದು ಕಾಂಗ್ರೆಸ್ ಪಟ್ಟು ಹಿಡಿದ ಕಾರಣ ಕಲಾಪ ಮುಂದೂಡಲಾಯಿತು.ಮಂಗಳವಾರ ವಿಧಾನಸಭೆಯಲ್ಲಿ ಕಲಾಪ ನಡೆಯುತ್ತಿದ್ದಾಗ ಬಿಜೆಪಿ ಶಾಸಕರಾದ ಶಂಕರ್ ಚೌಧರಿ ಮತ್ತು ಜೇಥಾ ಭಾರ‌್ವಾದ್ ಅವರು ತಮ್ಮ ಟ್ಯಾಬ್ಲೆಟ್‌ನಲ್ಲಿ ಮೊದಲಿಗೆ ಸ್ವಾಮಿ ವಿವೇಕಾನಂದರ ಚಿತ್ರ ಮತ್ತು ವ್ಯಂಗ್ಯಚಿತ್ರಗಳನ್ನು, ಆ ನಂತರ ಮಹಿಳೆಯ ಅಶ್ಲೀಲ ಚಿತ್ರವನ್ನು ವೀಕ್ಷಿಸುತ್ತಿದ್ದರು. ಇದನ್ನು ವಿಧಾನಸಭಾಧ್ಯಕ್ಷ ಗಣಪತ್ ಪಾರ್ಮರ್ ಅವರ ಗಮನಕ್ಕೆ ತಾವು ತಂದ ಮೇಲೆ ವೀಕ್ಷಣೆ ನಿಲ್ಲಿಸಲಾಯಿತು ಎಂದು ಪತ್ರಕರ್ತರೊಬ್ಬರು ಆರೋಪಿಸಿದ್ದಾರೆ.ಈ ಆರೋಪವನ್ನು ಬಿಜೆಪಿ ನಿರಾಕರಿಸಿದೆ. ಅಗತ್ಯ ಬಿದ್ದರೆ ಪ್ರಕರಣದ ಬಗ್ಗೆ ತನಿಖೆ ನಡೆಸಲಾಗುವುದು ಎಂದು ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ವಿಜಯ್ ರೂಪಾನಿ ತಿಳಿಸಿದ್ದಾರೆ.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.