ಗುಜರಾತ್ ಸರ್ಕಾರಕ್ಕೆ ನೋಟಿಸ್

7

ಗುಜರಾತ್ ಸರ್ಕಾರಕ್ಕೆ ನೋಟಿಸ್

Published:
Updated:

ಅಹಮದಾಬಾದ್ (ಪಿಟಿಐ): ಅಮಾನತುಗೊಂಡಿರುವ ಐಪಿಎಸ್ ಅಧಿಕಾರಿ ಸಂಜೀವ್ ಭಟ್ ಅವರ ಜಾಮೀನು ಅರ್ಜಿಗೆ ಸಂಬಂಧಿಸಿದಂತೆ ಸ್ಥಳೀಯ ನ್ಯಾಯಾಲಯ ಗುಜರಾತ್ ಸರ್ಕಾರಕ್ಕೆ ಸೋಮವಾರ ನೋಟಿಸ್ ಜಾರಿ ಮಾಡಿದೆ.ಜಾಮೀನು ಅರ್ಜಿಯನ್ನು ಮಂಗಳವಾರಕ್ಕೆ ಮುಂದೂಡಿದ ಇಲ್ಲಿನ ಸೆಷನ್ಸ್ ನ್ಯಾಯಾಧೀಶ ವಿ.ಕೆ.ವ್ಯಾಸ್ ಅವರು, ಗುಜರಾತ್ ಸರ್ಕಾರಕ್ಕೆ ಈ ದಿಸೆಯಲ್ಲಿ ನೋಟಿಸ್ ಜಾರಿಗೆ ಆದೇಶಿಸಿದರು.ಸದ್ಯ ಸಬರಮತಿ ಜೈಲಿನಲ್ಲಿರುವ ಭಟ್ ಅವರನ್ನು 2002ರಲ್ಲಿ ಗೋಧ್ರಾ ಹತ್ಯಾಕಾಂಡದ ಸಂದರ್ಭದಲ್ಲಿ ಸಾಕ್ಷ್ಯನಾಶ ಹಾಗೂ ಬೆದರಿಕೆ ಆರೋಪಗಳ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿ ಬಂಧನದಲ್ಲಿಡಲಾಗಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry