ಗುಜ್ಜರ್ ಸಮುದಾಯದ ಪ್ರತಿಭಟನೆ : ರೈಲು ಸಂಚಾರಕ್ಕೆ ಧಕ್ಕೆ
ಜೈಪುರ (ಪಿಟಿಐ): ರಾಜಸ್ತಾನದ ಭರತ್‌ಪುರ ಜಿಲ್ಲೆಯಲ್ಲಿ ಗುಜ್ಜರ್ ಸಮುದಾಯದವರು ನಡೆಸುತ್ತಿರುವ ಪ್ರತಿಭಟನೆ ಮಂಗಳವಾರ ಎರಡನೇ ದಿನಕ್ಕೆ ಕಾಲಿಟ್ಟಿದ್ದು, ರಸ್ತೆ ಹಾಗೂ ರೈಲು ಸಂಚಾರಕ್ಕೆ ಅಡಚಣೆ ಉಂಟಾಗಿದೆ.
ಸಮುದಾಯಕ್ಕೆ ಮೀಸಲಾತಿಗೆ ಆಗ್ರಹಿಸಿ ಕಿರೋರಿ ಸಿಂಗ್ ಬೈನ್ಸಲ ನೇತೃತ್ವದಲ್ಲಿ ಪ್ರತಿಭಟನೆಗೆ ಇಳಿದಿದ್ದಾರೆ. ಮಾತುಕತೆ ಮೂಲಕ ಸಮಸ್ಯೆ ಇತ್ಯರ್ಥಕ್ಕೆ ಪ್ರಯತ್ನಿಸುವುದಾಗಿ ರಾಜ್ಯ ಸರ್ಕಾರ ಭರವಸೆ ನೀಡಿರುವುದರ ನಡುವೆಯೂ ನಡೆಯುತ್ತಿರುವ ಈ ಪ್ರತಿಭಟನೆಯಿಂದಾಗಿ ಹಲವಾರು ರೈಲುಗಳ ಮಾರ್ಗಗಳನ್ನು ಬದಲಿಸಲಾಗಿದೆ. ಎರಡು ಮಾರ್ಗಗಳಲ್ಲಿ ಬಸ್‌ಗಳ ಸಂಚಾರವನ್ನು ತಡೆಹಿಡಿಯಲಾಗಿದೆ. ಜನಶತಾಬ್ದಿ ಎಕ್ಸ್‌ಪ್ರೆಸ್ ಮತ್ತು ಜಮುನಾಬ್ರಿಜ್ ಎಕ್ಸ್‌ಪ್ರೆಸ್ ರೈಲುಗಳ ಸಂಚಾರವನ್ನು ರದ್ದುಪಡಿಸಲಾಗಿದೆ.
ಪ್ರತಿಭಟನಾ ಸ್ಥಳ ಇರುವ ಪಿಲುಕಪುರ್ ಪ್ರದೇಶದ ದೆಹಲಿ- ಮುಂಬೈ ರೈಲು ಹಳಿಗಳ ಬಳಿ ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದೆ. ಮೀಸಲು ಪಡೆ, ರೈಲ್ವೆ ಸುರಕ್ಷಾ ಪಡೆ ಹಾಗೂ ಸರ್ಕಾರಿ ರೈಲ್ವೆ ಪೊಲೀಸ್ ಪಡೆಗಳು ಬೀಡುಬಿಟ್ಟಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.