ಧಾರವಾಡ: ಗುಟ್ಕಾ ಮತ್ತು ಪಾನ್ ಮಸಾಲಾ ನಿಷೇಧಿಸುವ ಅಧಿಕಾರ ರಾಜ್ಯ ಸರ್ಕಾರಕ್ಕೆ ಇಲ್ಲ. ಹೀಗಾಗಿ ಆಹಾರ ಸುರಕ್ಷತಾ ಆಯುಕ್ತರು ಹೊರಡಿಸಿರುವ ಅಧಿಸೂಚನೆಗೆ ತಡೆಯಾಜ್ಞೆ ನೀಡುವಂತೆ ಘೋಡಾವತ್ ಪಾನ್ ಮಸಾಲಾ ಉತ್ಪಾದನಾ ಕಂಪನಿ ಸೇರಿದಂತೆ ಮೂರು ಕಂಪನಿಗಳು ಸಲ್ಲಿಸಿದ್ದ ಮಧ್ಯಂತರ ಅರ್ಜಿಯನ್ನು ಇಲ್ಲಿನ ಹೈಕೋರ್ಟ್ ಸಂಚಾರಿ ಪೀಠ ಮಂಗಳವಾರ ವಜಾಗೊಳಿಸಿದೆ.

ಜೂ 11ರಂದು ಮೂರು ಕಂಪೆನಿಗಳು ಸಲ್ಲಿಸಿದ್ದ ರಿಟ್ ಅರ್ಜಿಯ ಪ್ರಾಥಮಿಕ ವಿಚಾರಣೆಯನ್ನು ಪೂರ್ಣಗೊಳಿಸಿದ್ದ ನ್ಯಾಯಪೀಠ, ಮಧ್ಯಂತರ ಅರ್ಜಿಯ ಮೇಲಿನ ಆದೇಶವನ್ನು ಕಾಯ್ದಿರಿಸಿತ್ತು. ಮಂಗಳವಾರ ಆದೇಶ ಪ್ರಕಟಿಸಿದ ನ್ಯಾಯಮೂರ್ತಿ ಬಿ.ಎಸ್.ಪಾಟೀಲ ಅವರಿದ್ದ ನ್ಯಾಯಪೀಠ ಕಂಪೆನಿ ಪರ ಸಲ್ಲಿಕೆಯಾಗಿದ್ದ ಮಧ್ಯಂತರ ಅರ್ಜಿಯನ್ನು ವಜಾಗೊಳಿಸಿತು.

`ಆಹಾರ ಸುರಕ್ಷತೆ ಮತ್ತು ಆಹಾರ ಭದ್ರತೆ ಮತ್ತು ಮಾನದಂಡ ಕಾಯ್ದೆ-2006ರಡಿ 2011ರ ಅಗಸ್ಟ್ 5ರಂದು ನಿಯಮಗಳನ್ನು ರೂಪಿಸಲಾಗಿದ್ದು, ಅದರನ್ವಯ ತಂಬಾಕು ಮತ್ತು ನಿಕೋಟಿನ್ ಅಂಶ ಇರುವ ಆಹಾರ ಉತ್ಪನ್ನಗಳನ್ನು ನಿಷೇಧಿಸುವ ಅಧಿಕಾರ ರಾಜ್ಯ ಸರ್ಕಾರಕ್ಕೆ ಇದೆ. ಹೀಗಾಗಿ ನಿಷೇಧ ಅಂದಿನಿಂದಲೇ ಇದೆ. ಅದನ್ನು ಅನಷ್ಠಾನಗೊಳಿಸುವ ನಿಟ್ಟಿನಲ್ಲಿ ಆಯುಕ್ತರು ಹೊರಡಿಸಿರುವ ಅಧಿಸೂಚನೆ ನಿಯಮಾವಳಿಗೆ ಅನುಗುಣವಾಗಿದೆ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.

ಜೊತೆಗೆ ಈ ಪ್ರಕರಣದಲ್ಲಿ ಪ್ರತಿವಾದಿಯಾಗಿ ಪರಿಗಣಿಸುವಂತೆ ಅರ್ಜಿ ಸಲ್ಲಿಸಿದ್ದ ಕ್ಯಾನ್ಸರ್ ಪೀಡಿತರ ಸಹಾಯ ಸಂಸ್ಥೆಯು, ತಂಬಾಕು ಸೇವನೆಯಿಂದ ಹಲವಾರು ಕ್ಯಾನ್ಸರ್ ಬರುತ್ತವೆ. ಅಲ್ಲದೇ, ಗುಟ್ಕಾ ಸೇವನೆ ಮಾಡುತ್ತಿರುವವರಲ್ಲಿ ಹದಿ ಹರೆಯದವರೇ ಹೆಚ್ಚು ಎನ್ನುವ ಅಂಶಗಳನ್ನು ಅಂಕಿ, ಅಂಶ ಸಮೇತ ನ್ಯಾಯಪೀಠದ ಗಮನ ಸೆಳೆದಿತ್ತು. ಇದನ್ನೆಲ್ಲ ಗಮನಿಸಿದರೆ ಸಮಾಜದ ಸ್ವಾಸ್ಥ್ಯದ ದೃಷ್ಟಿಯಿಂದ ತಡೆಯಾಜ್ಞೆ ನೀಡುವುದು ಸರಿಯಾದ ಕ್ರಮವಾಗುವುದಿಲ್ಲ ಎಂದೂ ಆದೇಶದಲ್ಲಿ ನ್ಯಾಯಪೀಠ ಅಭಿಪ್ರಾಯಪಟ್ಟಿದೆ.

ಜನರಿಗೆ ಉತ್ತಮ ಆರೋಗ್ಯದ ಭರವಸೆ ನೀಡುವುದು ರಾಜ್ಯ ಸರ್ಕಾರದ ಕರ್ತವ್ಯ. ಗುಟ್ಕಾ ಮತ್ತು ಪಾನ್ ಮಸಾಲಾ ನಿಷೇಧಿಸಿರುವುದು ನಿಯಮಾವಳಿ ಅನುಸಾರವಾಗಿಯೇ ಇದೆ. ಆಹಾರ ಸುರಕ್ಷತೆಗೆ ಸಂಬಂಧಿಸಿದಂತೆ ಆಹಾರ ಸಂರಕ್ಷಣೆ ಮತ್ತು ಗುಣಮಟ್ಟ ಕಾಯ್ದೆಯೇ ವಿಶೇಷ ಕಾಯ್ದೆ. ಉಳಿದ ಕಾಯ್ದೆಗಳು ಅದಕ್ಕೆ ಪೂರಕ. ಸುಪ್ರೀಂ ಕೋರ್ಟ್ ನ್ಯಾಯಾಲಯದ ನಿರ್ದೇಶನದಂತೆ ಕೇಂದ್ರ ಸರ್ಕಾರ ಗುಟ್ಕಾ ಮತ್ತು ಪಾನ್ ಮಸಾಲಾಗಳನ್ನು ನಿಷೇಧಿಸಿದೆ. ಅದನ್ನು ದೇಶದ 25 ರಾಜ್ಯಗಳು 3 ಕೇಂದ್ರಾಡಳಿತ ಪ್ರದೇಶಗಳು ಜಾರಿಗೊಳಿಸಿವೆ.

ಕೇಂದ್ರ ಸರ್ಕಾರದ ಸೂಚನೆಯ ಹಿನ್ನೆಲೆಯಲ್ಲಿ ನಿಷೇಧದ ಅಧಿಸೂಚನೆ ಹೊರಡಿಸಲಾಗಿದ್ದು, ಈ ಕುರಿತು ಸುಪ್ರೀಂ ಕೋರ್ಟ್ಗೆ ಪ್ರಮಾಣಪತ್ರ ಕೂಡಾ ಸಲ್ಲಿಸಲಾಗಿದೆ ಎನ್ನುವ ಸರ್ಕಾರದ ವಾದವನ್ನು ನ್ಯಾಯಪೀಠ ಅನುಮೋದಿಸಿದೆ.

ಅರ್ಜಿದಾರರ ಪರ ಹಿರಿಯ ವಕೀಲ ಎ.ಜಿ.ರಾಘವನ್, ಪ್ರಕಾಶ ಗೌಡರ, ವೀರೇಶ ಬೂದಿಹಾಳ ವಾದ ಮಂಡಿಸಿದ್ದರೆ, ಸರ್ಕಾರದ ಪರವಾಗಿ ಅಡ್ವೊಕೇಟ್ ಜನರಲ್ ಪ್ರೊ.ರವಿವರ್ಮ ಕುಮಾರ್, ಕ್ಯಾನ್ಸರ್ ಪೀಡಿತರ ಸಹಾಯ ಸಂಸ್ಥೆ ಪರವಾಗಿ ಜಯನ ಕೊಠಾರಿ ಮತ್ತು ಅರವಿಂದ ಕುಲಕರ್ಣಿ ವಾದ ಮಂಡಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.