ಭಾನುವಾರ, ಮೇ 9, 2021
26 °C

`ಗುಟ್ಕಾ ನಿಷೇಧ-ಚಿಂತನೆ ಅಗತ್ಯ'

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

`ಗುಟ್ಕಾ ನಿಷೇಧ-ಚಿಂತನೆ ಅಗತ್ಯ'

ಕಿನ್ನಿಗೋಳಿ (ಮೂಲ್ಕಿ); ಅಡಿಕೆ ಕೃಷಿಯ ಬಗ್ಗೆ ಕೃಷಿಕರು ಹಾಗೂ ತಜ್ಞರಲ್ಲಿ ಚರ್ಚಿಸಿ ಬೆಳೆಗಾರರಿಗೆ ಪರ್ಯಾಯ ವ್ಯವಸ್ಥೆ ಮಾಡಿದ ನಂತರ ಗುಟ್ಕಾ ನಿಷೇಧ ಜಾರಿ ಮಾಡುವ ಬಗ್ಗೆ ಸರ್ಕಾರ ಚಿಂತನೆ ಮಾಡಬೇಕು. ಇದರ ಬದಲಿಗೆ ದ್ವೇಷದ ರಾಜಕಾರಣ ಮಾಡುತ್ತಿರುವುದು ಸಲ್ಲದು ಎಂದು ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದರು.ಕಿನ್ನಿಗೋಳಿಯ ಯುಗಪುರುಷ ಸಭಾ ಭವನದಲ್ಲಿ ಭಾನುವಾರ ನಡೆದ ಮುಲ್ಕಿ ಮೂಡಬಿದಿರೆ ಕ್ಷೇತ್ರದ ಬಿಜೆಪಿ ಕಾರ್ಯಕರ್ತರ ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡಿದರು. ದಕ್ಷಿಣ ಕನ್ನಡ ಬಿಜೆಪಿ ಜಿಲ್ಲಾಧ್ಯಕ್ಷ ಪದ್ಮನಾಭ ಕೊಟ್ಟಾರಿ ಅಧ್ಯಕ್ಷತೆ ವಹಿಸಿದ್ದರು.

ಮಾಜಿ ಸಚಿವ ಕೋಟ ಶ್ರಿನಿವಾಸ ಪೂಜಾರಿ ಮಾತನಾಡಿ 43 ಹೊಸ ತಾಲ್ಲೂಕುಗಳನ್ನು ರದ್ದು ಮಾಡುವ ಅಭಿಪ್ರಾಯ ಸರಿಯಲ್ಲ. ಕಾಂಗ್ರೆಸ್ ಮಂತ್ರಿಗಳು ಮತ್ತು ಶಾಸಕರು ಅವಾಂತರ ಸೃಷ್ಟಿಸುವ ಹೇಳಿಕೆ ಹಾಗೂ ನಡವಳಿಕೆಗಳನ್ನು ನಿಲ್ಲಿಸಿ ಜನೋಪಯೋಗಿ ಪಾರದರ್ಶಕ ಆಡಳಿತ ನೀಡಬೇಕು ಎಂದು ಹೇಳಿದರು.ಮುಲ್ಕಿ ಮೂಡುಬಿದಿರೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿದ್ದ ಉಮಾನಾಥ ಕೋಟ್ಯಾನ್ ಮಾತನಾಡಿ, ಕಾರ್ಯಕರ್ತರು ಹುಮ್ಮಸ್ಸಿನಿಂದ ಕ್ಷೇತ್ರದಲ್ಲಿ ಬಿಜೆಪಿ ಹೆಚ್ಚಿನ ಸಾಧನೆ ಮಾಡಿದೆ. ಸೋಲು ಗೆಲುವು ಸಹಜ ಜನಪರ ಕಾಳಜಿಯ ಹೋರಾಟ ಬಿಜೆಪಿಗೆ ಇದೆ. ಮುಂದಿನ ಯಶಸ್ಸಿಗೆ ಕಾರ್ಯಕರ್ತರು ಸನ್ನದ್ಧರಾಗಬೇಕು ಎಂದರು.ಜಿಲ್ಲಾ ಉಪಾಧ್ಯಕ್ಷರಾದ ಜಗದೀಶ್ ಅಧಿಕಾರಿ, ಭುವನಾಭಿರಾಮ ಉಡುಪ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಸುಚರಿತ ಶೆಟ್ಟಿ, ಮುಲ್ಕಿ ಮೂಡುಬಿದಿರೆ ಬಿಜೆಪಿ ಕ್ಷೇತ್ರಾಧ್ಯಕ್ಷೆ ಕಸ್ತೂರಿ ಪಂಜ, ಪ್ರಧಾನ ಕಾರ್ಯದರ್ಶಿ ಆದರ್ಶ್ ಶೆಟ್ಟಿ ಎಕ್ಕಾರು, ಪ್ರಸಾದ್ ಬೆಳ್ತಂಗಡಿ ಉಪಸ್ಥಿತರಿದ್ದರು. ಜಯಂತ್ ಸ್ವಾಗತಿಸಿದರು. ದಿವಾಕರ ಸಾಮಾನಿ ಕಾರ್ಯಕ್ರಮ ನಿರೂಪಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.