ಮಂಗಳವಾರ, ನವೆಂಬರ್ 19, 2019
29 °C

ಗುಟ್ಕಾ ನಿಷೇಧ: ರಾಜ್ಯಗಳ ಅಭಿಪ್ರಾಯ ಸಂಗ್ರಹಕ್ಕೆ ಸುಪ್ರೀಂ ಸೂಚನೆ

Published:
Updated:

ನವದೆಹಲಿ (ಪಿಟಿಐ): ದೇಶದೆಲ್ಲಡೆ ಗುಟ್ಕಾ ನಿಷೇಧಕ್ಕೆ ಸಂಬಂಧಿಸಿದಂತೆ ಎಲ್ಲಾ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ ಅಭಿಪ್ರಾಯ ಸಂಗ್ರಹಿಸುವಂತೆ ಸುಪ್ರೀಂ ಕೋರ್ಟ್ ಬುಧವಾರ ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ.ಗುಟ್ಕಾ ಮೇಲಿನ ನಿಷೇಧ ಪ್ರಕರಣವನ್ನು ವಿಚಾರಣೆ ನಡೆಸಿದ ನ್ಯಾ. ಜಿ.ಎಸ್ ಸಿಂಘ್ವಿ ಅವರು 23 ರಾಜ್ಯಗಳು ಮತ್ತು 5 ಕೇಂದ್ರಾಡಳಿತ ಪ್ರದೇಶಗಳ ಅಭಿಪ್ರಾಯವನ್ನು ಸಂಗ್ರಹಿಸಿ ನಾಲ್ಕು ವಾರದೊಳಗೆ ನ್ಯಾಯಾಲಯಕ್ಕೆ ವರದಿ ಸಲ್ಲಿಸುವಂತೆ ಸೂಚಿಸಿದರು.ಉತ್ತರ ಪ್ರದೇಶ, ದೆಹಲಿ ಮತ್ತು ಮಹಾರಾಷ್ಟ್ರ ರಾಜ್ಯಗಳಲ್ಲಿ ಗುಟ್ಕಾವನ್ನು ಒತ್ತಾಯ ಪೂರ್ವಕವಾಗಿ ನಿಷೇಧಿಸಲಾಗಿದೆ ಎಂದು ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಲಾಗಿದೆ. ಮುಂದಿನ ವಿಚಾರಣೆ ಮೇ 3 ರಂದು ನಡೆಯಲಿದೆ.

ಪ್ರತಿಕ್ರಿಯಿಸಿ (+)